ಬಳ್ಳಾರಿ ಜಿಲ್ಲೆ: ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಏನೂ ಕೊಡಲಿಲ್ಲ. ರಾಜ್ಯಕ್ಕೆ ಶೂನ್ಯ ಕೊಡುಗೆ ನೀಡಿದೆ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇ ತುಕಾರಾಂ ಅವರು ಆರೋಪ ಮಾಡಿದರು. ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಬೃಹತ್ ರೋಡ್ ಶೋ ಅದ್ದೂರಿ ಪ್ರಚಾರ ಮಾಡಿದ ಅವರು ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಹಲವು ರೀತಿಯಲ್ಲಿ ಅನ್ಯಾಯ ಮಾಡಿದೆ. ರಾಜ್ಯಕ್ಕೆ ನೀಡಬೇಕಾದಷ್ಟು ಬರಪರಿಹಾರವನ್ನೂ ನೀಡಲಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು. ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿ ಇತಿಹಾಸ ನಿರ್ಮಿಸಿ ಎಂದು ಅವರು ಜನರಲ್ಲಿ ಮನವಿ ಮಾಡಿದರು.
Small Saving: ಈ ಯೋಜನೆಯಲ್ಲಿ 417ರೂ. ಹೂಡಿಕೆ ಮಾಡಿದ್ರೆ ಮಿಲೇನಿಯರ್ ಆಗಬಹುದು..! ಹೇಗೆ ಗೊತ್ತಾ..?
ಕಂಪ್ಲಿ ಪಟ್ಟಣದ ಡಾ. ಬಿ. ಆರ್.ಅಂಬೇಡ್ಕರ್ ವೃತ್ತದ ಭಾಗದಲ್ಲಿ ಮತಯಾಚನೆ ವೇಳೆ ಬಿಸಿಲ ಬೇಗೆಯ ನಡುವೆ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಬಳ್ಳಾರಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಯೋಗಿ,
ಬಳ್ಳಾರಿ ನಗರದ ಮಾಜಿ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಫೀಕ್, ಕಂಪ್ಲಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಂಪ್ಲಿ ಪಟ್ಟಣದ ಪುರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸದಸ್ಯರು, ಕಂಪ್ಲಿ ವಿವಿಧ ಭಾಗಗಳಿಂದ ಬಂದ ಜಿಲ್ಲಾ ಪಂಚಾಯತಿ ಸದಸ್ಯರು, ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಮತ್ತು ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.