ಕಾರವಾರ: ಸಿದ್ದರಾಮಯ್ಯನವರಿಗೆ (Siddaramaiah) ಧಮ್ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ. ಹಿಜಬ್ನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ. ಸಿದ್ದರಾಮಯ್ಯನ ಸರ್ಕಾರ ಹುಚ್ಚು ಮಹಮ್ಮದ್ನ ಸರ್ಕಾರ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegade) ಕಿಡಿಕಾರಿದ್ದಾರೆ.
ಶಿರಸಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ವೋಟುಗಳು ಇಲ್ಲದೇ ಕಾಂಗ್ರೆಸ್ ಬದುಕಲು ಸಾಧ್ಯವಿಲ್ಲ. ಯಾವತ್ತೂ ಕಾಂಗ್ರೆಸ್ ಬಹುಸಂಖ್ಯಾತರ ರಾಜಕಾರಣ ಮಾಡಿಲ್ಲ. ಮನಸ್ಸಿಗೆ ಬಂದಂತೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
iPhone 16 ಲೈನ್ಅಪ್ ಬಗ್ಗೆ ನಿಮಗೇನು ಗೊತ್ತು?: A18 ಚಿಪ್ ಯಾಕೆ ಹಾಕ್ತಾರೆ ಗೊತ್ತಾ?
ಈ ರಾಜ್ಯದ ಜನತೆ ತೆಗೆದಿಟ್ಟ ವ್ಯಕ್ತಿ ಟಿಪ್ಪು. ಈ ರಾಜ್ಯವನ್ನು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ತೊಂದರೆಗೀಡು ಮಾಡಿದ ವ್ಯಕ್ತಿ. ಅವನ ಹೆಸರನ್ನೇ ತೆಗದುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತೆ ಎಂದರೇ ಕಾಂಗ್ರೆಸ್ಗೆ ಮುಂದಿನ ದಿನ ಜನತೆ ಹೇಗೆ ಉತ್ತರ ಕೊಡುತ್ತಾರೆ ಎಂಬುದನ್ನು ಯೋಚನೆ ಮಾಡಬೇಕು ಎಂದು ತಿಳಿಸಿದ್ದಾರೆ.
ಹಿಜಬ್ ವಿಷಯದಲ್ಲಿ ಸಿದ್ದರಾಮಯ್ಯ ಅವರ, ಯಾರು ಬೇಕಾದ್ರು ಏನು ಬೇಕಾದ್ರು ಡ್ರೆಸ್ ಹಾಕಿಕೊಂಡು ಹೋಗಬಹುದು ಎಂಬ ಹೇಳಿಕೆ ಮುಂದಿನ ದಿನ ಆತಂಕಕಾರಿ ಬೆಳವಣಿಗೆಗೆ ಕಾರಣ ಆಗುತ್ತೆ. ನಮ್ಮವರು ಕೇಸರಿ ಶಾಲು ಹಾಕಿಕೊಂಡು ಹೋಗ್ತಾರೆ. ಅವರು ಹಿಜಬ್ ಹಾಕಿಕೊಂಡು ಹೋಗ್ತಾರೆ. ಒಂದು ಚೌಕಟ್ಟಿನ ಕಲ್ಪನೆ ಸರ್ಕಾರಕ್ಕೆ ಇಲ್ಲಾ ಎಂದಾದರೇ ಸರ್ಕಾರ ಇದೆ ಎಂದು ಅನಿಸುವುದಿಲ್ಲ. ಸಿದ್ದರಾಮಯ್ಯನವರಿಗೆ ಧಮ್ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ ಎಂದು ಸವಾಲು ಹಾಕಿದ್ದಾರೆ.