ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮಾಗಮದಿಂದಾಗಿ ಲೋಕಸಭೆ ಚುನಾವಣೆಯಲ್ಲಿ ತ್ರಿಬಲ್ ಎಂಜಿನ್ ಗೆಲುವಿನ ಗಾಳಿ ಬೀಸುತ್ತಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು. ಪ್ರಚಾರದ ವೇಳೆ ಅವರು ಮಾತನಾಡಿದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಇರುವವರೆಗೂ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲೇ ಉಳಿಯಲಿದೆ.
ಬಿಜೆಪಿ ಯಾವಾಗಲೂ ಆಡಳಿತದ ಸ್ಥಾನದಲ್ಲಿದ್ದು ಜನ ಕಲ್ಯಾಣ ಕಾರ್ಯಗಳನ್ನು ಮಾಡಲಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀರಾವರಿಗೆ ಕೊಟ್ಟಷ್ಟು ಕೊಡುಗೆಗಳನ್ನು ಯಾರೂ ಕೊಟ್ಟಿಲ್ಲ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಕೆಟ್ಟದಾಗಿ ಹೇಳಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ. ಅದರೆ ಮಹಿಳೆಯರಿಗಾಗಿಯೇ ಕುಮಾರಸ್ವಾಮಿ ಅವರು ಸಾರಾಯಿ ನಿಷೇಧ ಮಾಡಿದ್ದರು. ರೈತರ ಸಾಲ ಮನ್ನಾ ಮಾಡಿದ್ದರು. ಕಾಂಗ್ರೆಸ್ಗೆ ಹೇಳಲು ಸಾಧನೆಗಳ ಸರಕು ಇಲ್ಲದೆ ಈ ರೀತಿಯ ತಂತ್ರ ಹೆಣೆಯುತ್ತಿದೆ ಎಂದರು.
ನಿಮ್ಮ ಮನೆಯಲ್ಲಿ ಇರುವೆಗಳ ಕಾಟವೇ.? ಸುಲಭವಾಗಿ ಹೋಗಲಾಡಿಸಲು ಇಲ್ಲಿದೆ ಸಿಂಪಲ್ ಟಿಪ್ಸ್
ಕಾಂಗ್ರೆಸ್ ಇಂಡಿ ಕೂಟ ಮಾಡಿಕೊಂಡು ಮಂಡಿಯಲ್ಲಿ ಭಾರತವನ್ನೇ ಮಾರಾಟ ಮಾಡಲು ಮುಂದಾಗಿದೆ. 40 ಸ್ಥಾನಕ್ಕಿಂತ ಹೆಚ್ಚು ಬರಲ್ಲಎನ್ನುವುದು ಗೊತ್ತಿರುವುದರಿಂದ ಹಾಗೂ ಮುಂದಿನ 50 ವರ್ಷ ಅಧಿಕಾರ ಸಿಗದಿರುವುದು ಖಚಿತವಾಗಿರುವುದರಿಂದ ಗ್ಯಾರಂಟಿ ಕಾರ್ಡುಗಳನ್ನು ನೀಡುತ್ತಿದ್ದಾರೆ. 2,000 ರೂ. ಕೊಡುತ್ತಿರುವುದರಿಂದಲೇ ರಾಜ್ಯದ ಸ್ಥಿತಿ ಅಧೋಗತಿಗೆ ಸಾಗಿದೆ. ದೇಶದ ಬೊಕ್ಕಸದಿಂದ ಇದೇ ರೀತಿ ಹಣ ನೀಡಿದರೆ ಇಡೀ ದೇಶ ಹಾಳಾಗಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶವನ್ನು ಪಾಕಿಸ್ತಾನಕ್ಕಿಂತ ಹಿಂದಕ್ಕೆ ಕೊಂಡೊಯ್ಯಲಿದೆ ಎಂದರು.