ಹುಬ್ಬಳ್ಳಿ: ರಾಜ್ಯದ ಮೂರು ಕ್ಷೇತ್ರದಲ್ಲಿ ಉಪಚುನಾವಣೆ ಕಾವು ಜೋರಾಗಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಟೋಕನ್ ಮೂಲಕ ಹಣ ಹಂಚಿಕೆಗೆ ಮುಂದಾಗಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮುಡಾ ಹಗರಣಕ್ಕೆ ಟ್ವಿಸ್ಟ್: ನಿವೇಶನ ಹಂಚಿಕೆ ಪಟ್ಟಿ ಲಭ್ಯ! ಒಬ್ಬರಿಗೆ ಹಂಚಿದ್ದ ಸೈಟ್ ಎಷ್ಟು!?
ಈ ಸಂಬಂಧ ಮಾತನಾಡಿದ ಅವರು, ಶತಾಯ ಗತಾಯ ಉಪಚುನಾವಣೆ ಗೆಲ್ಲಬೇಕೆಂಬ ಭರದಲ್ಲಿ ಕಾಂಗ್ರೆಸ್ ಪಕ್ಷ ಟೋಕನ್ ಮೂಲಕ ಹಣ ಹಂಚಿಕೆ ಶುರು ಮಾಡಿದೆ ಎಂದು ಹೇಳಿದರು. ಟೋಕನ್ ಹಂಚಿದ ಕಾಂಗ್ರೆಸ್ ಅದನ್ನು ತೋರಿಸಿದವರಿಗೆ ಹಣ ಕೊಟ್ಟು ಕಳಿಸುವ ವ್ಯವಸ್ಥೆ ಮಾಡಿದೆ ಎಂಬುದು ಮಾದ್ಯಮಗಳಲ್ಲಿ ವರದಿಯಾಗಿದೆ ಎಂದು ಉಲ್ಲೇಖಿಸಿದ ಸಚಿವರು, ಕಾಂಗ್ರೆಸ್ ಲೂಟಿ ಮಾಡಿದ್ದನ್ನು ಹೀಗೆ ಹಂಚುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ನಡೆಯುತ್ತಿರುವ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲುವುದು ನಾವೇ ಎಂದು ಜೋಶಿ ಹೇಳಿದರು.
ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವಿದೆ. ಪ್ರಚಾರ ವೇಳೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹಾಗಾಗಿ ಎನ್ಡಿಎ ಅಭೂತಪೂರ್ವ ಗೆಲುವು ಸಾಧಿಸಲಿದೆ. ಸಂಡೂರು, ಶಿಗ್ಗಾವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.