ಹಾವೇರಿ:- ಅಲ್ಪಸಂಖ್ಯಾತರಿಗೆ ಹೆಚ್ಚಿನ ಪ್ರೋತ್ಸಾಹ ಕಾಂಗ್ರೆಸ್ ನೀಡುತ್ತದೆ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷದವರು ಹೆಚ್ಚಿನ ಪ್ರೋತ್ಸಾಹ ಕೊಡುತ್ತೇವೆ. ಅನೇಕ ಜನರು ಈ ದೇಶದ ಮೂಲ ನಿವಾಸಿಗಳ ಬಗ್ಗೆ ಮಾತನಾಡಿದ್ದಾರೆ. ದಲಿತರು, ಹಿಂದುಳಿದವರು, ಮೂಲನಿವಾಸಿಗಳು ಅಂತಾ ವ್ಯಾಖ್ಯಾನಿಸಿದ್ದಾರೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದೆ ಇರುವವರು ಹಿಂದುಳಿದವರು. ದೇಶದಲ್ಲಿ 16% ರಿಂದ 18% ಅಲ್ಪಸಂಖ್ಯಾತರಿದ್ದಾರೆ, ಅವರು ಹಿಂದುಳಿದವರು ಎಂದರು.
ಅಲ್ಲದೆ, ಸಂವಿಧಾನದ ಆಶಯಗಳಂತೆ ಅವಕಾಶ ಸಿಗಬೇಕೆಂಬುದು ಕಾಂಗ್ರೆಸ್ನ ನೀತಿಯಾಗಿದೆ. 1885ರಲ್ಲಿ ರಚಿಸಿರುವ ನಮ್ಮ ನೀತಿಗಳು ಇನ್ನೂ ಬದಲಾಗಿಲ್ಲ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷದವರು ಹೆಚ್ಚಿನ ಪ್ರೋತ್ಸಾಹ ಕೊಡುತ್ತೇವೆ. ಆ ಸಮುದಾಯಗಳಿಗೆ ಹೆಚ್ಚು ಪ್ರೋತ್ಸಾಹ ಕೊಡುತ್ತೇವೆ ಎಂದರು.
ಸುಪ್ರೀಂಕೋರ್ಟ್ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣ ಮಾಡಿಲ್ಲ ಎಂದು ಸಚಿವ ಸಂತೋಷ್ ಲಾಡ್ ಆರೋಪಿಸಿದ ವಿಚಾರವಾಗಿ ಮಾತನಾಡಿದ ಪರಮೇಶ್ವರ್, ಸಂತೋಷ್ ಲಾಡ್ ಹೇಳಿಕೆಯನ್ನು ಆರೋಪ ಅಂತಾ ಯಾಕೆ ಅಂತೀರಿ? ಸಚಿವ ಸಂತೋಷ್ ಲಾಡ್ ವಸ್ತುಸ್ಥಿತಿ ಹೇಳಿದ್ದಾರೆ. ಹೀಗಾಗಿ ಕಾರ್ಮಿಕ ಸಚಿವರ ಹೇಳಿಕೆ ಆರೋಪ ಅನ್ನೋದು ಸರಿಯಲ್ಲ ಎಂದು ಹೇಳುವ ಮೂಲಕ ಸಂತೋಷ್ ಲಾಡ್ ಹೇಳಿಕೆಯನ್ನು ಸಮರ್ಧಿಸಿಕೊಂಡರು.