ಬೆಂಗಳೂರು:- ಕಾಂಗ್ರೆಸ್ ಸರ್ಕಾರ ದಲಿತ ಮತ್ತು ಬಡವರ ವಿರೋಧಿ ಆಗಿದೆ ಎಂದು ಮಾಜಿ ಸಿಎಂ BS ಯಡಿಯೂರಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನಮಗೆ ಮೋದಿಯೇ ಗ್ಯಾರಂಟಿ. ಹತ್ತು ವರ್ಷದ ಅವಧಿಯಲ್ಲಿ ಕರ್ನಾಟಕಕ್ಕೆ ರೈಲ್ವೆ, ಹೆದ್ದಾರಿಗೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಲೋಕಸಭಾ ಸಮರವು ನಮ್ಮೆಲ್ಲರಿಗೆ ಬಹುದೊಡ್ಡ ತಿರುವಿನ ಸತ್ವ ಪರೀಕ್ಷೆಯಾಗಿದೆ. ಈ ಬಾರಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿಯವರಿಗೆ ನಮ್ಮದೇ ಆದ ಕೊಡುಗೆ ನೀಡಬೇಕಿದೆ ಎಂದು ಯಡಿಯೂರಪ್ಪ ಕರೆ ಕೊಟ್ಟರು.