ಬೆಂಗಳೂರು: ಆಡಳಿತ ವಿಕೇಂದ್ರೀಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ನ್ನ ವಿಧಾನಸಭೆಯಲ್ಲಿ ಅಂಗೀಕರಾ ಮಾಡಲಾಯಿತು. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಫ್ರೀಡಂ ಪಾರ್ಕ್ ನಲ್ಲಿ ಬೆಂಗಳೂರು ನಗರ ಅಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ ಬೆಂಗಳೂರು ನಗರ ಜೆಡಿಎಸ್ ನಗರ ಘಟಕ ಅಧ್ಯಕ್ಷ ರಮೇಶ್ ಗೌಡ, ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳಿಂದ ಜನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಜನರಿಗೆ ನಿತ್ಯ ನರಕ ತೋರಿಸುತ್ತಿದ್ದಾರೆ. ಕೆಂಪೇಗೌಡರು ಬೆಂಗಳೂರು ಕಟ್ಟಿದ್ದರು. ಈ ಸರ್ಕಾರ ಬೆಂಗಳೂರನ್ನ ಛಿದ್ರ ಛಿದ್ರ ಮಾಡ್ತಿದ್ದಾರೆ. ಬೆಂಗಳೂರನ್ನ 7 ಭಾಗ ಮಾಡಲು ಹೊರಟಿದ್ದಾರೆ. ರಿಯಲ್ ಎಸ್ಟೇಟ್ ಮಾಡಲು 7 ಭಾಗ ಮಾಡ್ತಿದ್ದಾರೆ ಅಂತ ಆರೋಪ ಮಾಡಿದ್ರು.
ಈ 5 ಅಂಚೆ ಕಚೇರಿ ಯೋಜನೆಗಳಲ್ಲಿ ಹೂಡಿಕೆ ಮಾಡುವ ಮೂಲಕ 1.5 ಲಕ್ಷ ರೂಪಾಯಿಗಳ ತೆರಿಗೆ ಉಳಿಸಬಹುದು!
ಬೆಂಗಳೂರು ಅನೇಕ ಸಮಸ್ಯೆ ಎದುರಿಸುತ್ತಿದೆ. ನೀರಿಲ್ಲ, ಟ್ರಾಫಿಕ್ ಜಾಮ್ ಸೇರಿ ಅನೇಕ ಸಮಸ್ಯೆ ಇದೆ. ಈ ಸರಕಾರದಲ್ಲಿ ಜನರು ನಿತ್ಯ ಸತ್ತು ಬದುಕುತ್ತಿದ್ದಾರೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಬಾರದು. ಕೂಡಲೇ ಸರ್ಕಾರ ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಪಡೆಯಬೇಕು. ಸರ್ಕಾರ ಬಿಲ್ ವಾಪಸ್ ಪಡೆಯದೇ ಹೋದ್ರೆ ಸಿಎಂ ಮತ್ತು ಸಚಿವ ಕಾರ್ಯಕ್ರಮಗಳಿಗೆ ಕಪ್ಪುಪಟ್ಟಿ ಪ್ರದರ್ಶನ ಮಾಡೋ ಕೆಲಸ ಜೆಡಿಎಸ್ ಮಾಡಲಿದೆ ಅಂತ ಎಚ್ಚರಿಕೆ ಕೊಟ್ರು.