ಬಾಗಲಕೋಟೆ: ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆ ಮುಂಚೆಯೇ ಬಿದ್ದು ಹೋಗುತ್ತದೆ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಬಾಗಲಕೋಟೆ ಜಿಲ್ಲೆಯಲ್ಲಿ ಮಾತನಾಡಿದ ಅವರು, ” ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಸಿಎಂ ಸ್ಥಾನ ವಿವಾದವನ್ನು ಅವರು ಮೊದಲು ಸರಿ ಮಾಡಿಕೊಳ್ಳಲಿ, ಸರ್ಕಾರ ಪತನ ಬಗ್ಗೆ ನಾವು ಕಾಯುತ್ತಿಲ್ಲ. ಬಿಜೆಪಿ ಪಕ್ಷವು ರೈತರ ಪರವಾಗಿದೆ, ರೈತರಿಗೆ ಸರ್ಕಾರ ನ್ಯಾಯ ಕೊಡದೇ ಇದ್ದಲ್ಲಿ ಹೋರಾಟ ಮಾಡಿ ನ್ಯಾಯ ಒದಗಿಸುವ ಕೆಲಸ ಬಿಜೆಪಿ ಪಕ್ಷ ಮಾಡುತ್ತದೆ ” ಎಂದರು. ಆಪರೇಷನ್ ಹಸ್ತದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದರು.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಬರ ಇದ್ದರೂ ರೈತರ ಕಣ್ಣೀರು ಒರೆಸುವ ಬದಲು ತಮ್ಮ ಶಾಸಕರ, ಸಚಿವರ ಕಣ್ಣೀರು ಒರೆಸುತ್ತಿದ್ದಾರೆ. ರೈತರ ಶಾಪ ಸರ್ಕಾರಕ್ಕೆ ತಟ್ಟುತ್ತದೆ ಸರ್ಕಾರ ಪತನವಾಗುತ್ತದೆ ಎಂದು ತಿಳಿಸಿದ ಕಟೀಲ್, ರಾಜ್ಯದಲ್ಲಿ ಭೀಕರ ಬರಗಾಲದಿಂದ ಮುಖ್ಯಮಂತ್ರಿ ಅವರು ರೈತರೊಂದಿಗೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಚರ್ಚೆ ಮಾಡುವ ರೈತರ ಸಮಸ್ಯೆ ಬಗೆ ಹರಿಸಬೇಕಾಗಿತ್ತು. ಆದರೆ ಮುಖ್ಯಮಂತ್ರಿಗಳು ಶಾಸಕರೊಂದಿಗೆ, ಮಂತ್ರಿಗಳೊಂದಿಗೆ ಸಭೆ ನಡೆಸುವ ಸಚಿವರ ಕಣ್ಣೀರು ಒರೆಸುವ ಮೂಲಕ ತಮ್ಮ ಸಿಎಂ ಸ್ಥಾನ ಭದ್ರತೆ ಮಾಡಿಕೊಳ್ಳುತ್ತಿದ್ದಾರೆ ಎಂದರು.