ಮುದ್ದೇಬಿಹಾಳ: ತಂದೆ ಮಾಡಿದ ಸಾಲ ಮಕ್ಕಳು ತೀರಿಸುವ ಹಾಗೆ ಹಿಂದಿನ ಬಿಜೆಪಿ ಸರ್ಕಾರ ಮಾಡಿಟ್ಟ ಸಾಲವನ್ನು ನಮ್ಮ ಕಾಂಗ್ರೆಸ್ ಸರ್ಕಾರ ತೀರಿಸುವ ಪರಿಸ್ಥಿತಿ ಬಂದಿದೆ. ಸರ್ಕಾರದ ಯಾವುದೇ ಇಲಾಖೆಯನ್ನು ಬಿಡದೇ ಖಜಾನೆಯನ್ನೇ ಖಾಲಿ ಮಾಡಿ ಕೊಳ್ಳೆ ಹೊಡೆದು ಹೋಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಆರೋಪಿಸಿದರು.
ಪಟ್ಟಣದ ಹುಡ್ಕೋ ಬಡಾವಣೆಯಲ್ಲಿನ ಗೃಹ ಕಚೇರಿಯಲ್ಲಿ ಪಕ್ಷದ ತಾಲೂಕು ಎಸ್ಸಿ, ಎಸ್ಟಿ ಘಟಕದ ನೂತನ ಅಧ್ಯಕ್ಷ ಶ್ರೀಕಾಂತ ಚಲವಾದಿ ಹಾಗೂ ಪ್ರಧಾನ ಕಾರ್ಯದರ್ಶಿ ಸಿ.ಜೆ.ವಿಜಯಕರಗೆ ಸನ್ಮಾನಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಬಡವರ, ದೀನ, ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ, ಮಹಿಳೆಯರ, ರೈತರ ಪರ ಕಾಳಜಿ ಇರುವ ಪಕ್ಷ.
ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್
ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಜನಪರ ಆಡಳಿತ ನಡೆಸುತ್ತಿದೆ. ಚುನಾವಣೆ ವೇಳೆ ಕಾಂಗ್ರೆಸ್ ಭರವಸೆ ನೀಡಿದಂತೆ ಐದು ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಇದನ್ನು ಸಹಿಸದ ಬಿಜೆಪಿಯವರು ಜನರಿಗೆ ಇಲ್ಲ ಸಲ್ಲದ ಸುಳ್ಳು ಸುದ್ದಿ ಹಬ್ಬಿಸಿ ಜನರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.