ಬೆಳಗಾವಿ : ‘ರಾಜ್ಯದಲ್ಲಿ ಮುಸ್ಲಿಮ್ ಸಮುದಾಯಕ್ಕೆ ನೀಡಿದ್ದ 2ಬಿ ಮೀಸಲಾತಿಯನ್ನು ಮರುಸ್ಥಾಪಿಸಿ, ಮೀಸಲಾತಿ ಪ್ರಮಾಣವನ್ನು ಶೇ 8ರಷ್ಟು ಹೆಚ್ಚಿಬೇಕು‘ಕಾಂತರಾಜ ವರದಿ ಜಾರಿಗೆ ಜಾರಿಗೊಳಿಸಬೇಕೆಂದು ಎಂದು ಆಗ್ರಹಿಸಿ ಬೆಳಗಾವಿಯ ಗಾಂಧಿನಗರ ರಸ್ತೆ ಪಕ್ಕ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗಾಂಧಿ ನಗರದಲ್ಲಿ ಸೇರಿದ ಪ್ರತಿಭಟನ ಕಾರರು ‘ಸಿದ್ದರಾಮಯ್ಯನವರು ಬಳ್ಖಾರಿಯಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ತಕ್ಚಣ 2ಬಿ ಮಿಸಲಾತಿ ಜಾರಿಗೋಳಿಸುತ್ತೆನೆಂದು ಹೇಳಿ ಈಗ ಸದನದಲ್ಲಿ ಚರ್ಚೆ ಮಾಡಿಲ್ಲ,ಅವರಿಗೆ ಬಿಜೆಪಿ ಭಯವಿದೆ ಎಂದು ಘೋಷಣೆ ಕೂಗಿದರು.ಅವರು ಅಹಿಂದ ವರ್ಗದ ಪರವೆಂದಾದರೆ ಕಾಂತರಾಜ್ ಆಯೋಗದ ವರದಿ ಜಾರಿಗೊಳಿಸಿ ‘ಮುಸ್ಲಿಮ್ ಸಮುದಾಯದವರಿಗೆ 2ಬಿ ಮೀಸಲಾತಿ ಮರು ಸ್ಥಾಪಿಸಿ’ ಎಂಬ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.
ಬಾಡಿಗೆ ಬೈಕ್’ನಲ್ಲಿ 330km ಪ್ರಯಾಣಿಸಿ ವಿಧಾನಸಭೆಗೆ ತೆರಳಿದ ಜನಪ್ರತಿನಿಧಿ!
‘ಹಿಂದಿನ ಬಿಜೆಪಿ ಸರ್ಕಾರ, ಮುಸ್ಲಿಮ್ ಸಮುದಾಯವನ್ನು ಹಿಂದುಳಿದ ವರ್ಗಗಳಿಂದ ಹೊರಗಿಡಲು 2ಬಿ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 2ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸುವುದಾಗಿ ಘೋಷಿಸಲಾಗಿತ್ತು. ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಕಾಂಗ್ರೆಸ್ ಸರ್ಕಾರ ಯಾವುದೇ ನಿರ್ಣಯ ಕೈಗೊಂಡಿಲ್ಲ’ ಕಾಂಗ್ರೆಸ್ ರಾಜಕೀಯಕ್ಕಾಗಿ ಡೊಂಬರಾಟ ಮಾಡೊದಲ್ಲಾ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.