ಬೆಂಗಳೂರು: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಸಂಬಂಧ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಒಂದು ಪಕ್ಷದ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ಸ್ಥಾನದಲ್ಲಿದ್ದಾರೆ. ಅವರ ಕೈಯಲ್ಲಿ ಮಾಡಲಾಗದ ಕೆಲಸವನ್ನು ಬಿಜೆಪಿ ಕೈಗೊಂಡಿದೆ ಹಾಗಾಗಿ ಈ ರೀತಿ ಪಾದಯಾತ್ರೆ ಕೈಗೊಂಡಿದ್ದಾರೆ.
ಅಲ್ಲದೇ ಮೇಕೆದಾಟು ಯೋಜನೆ ಇಂದು, ನಿನ್ನೆಯದಲ್ಲ. ಚುನಾವಣೆ 14 ತಿಂಗಳು ಇರುವುದರಿಂದ ರಾಜಕೀಯ ಗಿಮಿಕ್ ಮಾಡಲು ಹೊರಟಿದ್ದಾರೆ. ಆದರೆ ಅದು ಸಾಧ್ಯವಿಲ್ಲ. ಇನ್ನೂ ಪಾದಯಾತ್ರೆ ಮಾಡುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ದೇವರು ಒಳ್ಳೇದು ಮಾಡಲಿ ಎಂದು ಸಚಿವ ವಿ. ಸೋಮಣ್ಣ ಟಾಂಗ್ ಕೊಟ್ಟಿದ್ದಾರೆ.
