ಗದಗ:- ರಾಜ್ಯ ಆಳುವ ನೈತಿಕತೆ ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Siddaramaia: ನಿಮ್ಮ ಧ್ವನಿಯನ್ನು ಸಂಸತ್ತಿನಲ್ಲಿ ಸಮರ್ಥವಾಗಿ ಪ್ರತಿನಿಧಿಸುವವರನ್ನು ಆಯ್ಕೆ ಮಾಡಿ -ಸಿದ್ದರಾಮಯ್ಯ
ಈ ಸಂಬಂಧ ಮಾತನಾಡಿದ ಅವರು,ರಾಜ್ಯ ಸರ್ಕಾರ ರೈತರ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ರೈತ ಶಕ್ತಿ ಯೋಜನೆ ಸ್ಥಗಿತ ಮಾಡಿದ್ದಾರೆ. ಬರ ಪರಿಸ್ಥಿತಿಯಲ್ಲಿ ಒಂದು ರೂಪಾಯಿಯನ್ನೂ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆ ಎಂದರು.
ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಯಳವತ್ತಿ, ಮಾಗಡಿ, ಕಡಕೋಳ, ಬನ್ನಿಕೊಪ್ಪ, ಮಾಚೇನಹಳ್ಳಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
ಕಾಂಗ್ರೆಸ್ ಜನರಿಗೆ ಹೋಲ್ ಸೇಲ್ ಮೋಸ ಮಾಡಲು ನಿಂತಿದೆ. ಹೆಣ್ಣುಮಕ್ಕಳಿಗೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ ಅಂತಾ ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ. ಪ್ರಣಾಳಿಕೆ ಮಾಡಲಿ ಆದರೆ, ಗ್ಯಾರಂಟಿ ಕಾರ್ಡ್ ಕೊಟ್ಟು ಸುಳ್ಳು ಡೋಂಗಿ ಮಾಡುವುದಕ್ಕೆ ಶುರು ಮಾಡಿದ್ದಾರೆ. ಇದು ಕಾನೂನು ವಿರುದ್ಧ ಎಂದು ಗ್ಯಾರಂಟಿ ಕಾರ್ಡ್ ವಿರುದ್ಧ ಹರಿಹಾಯ್ದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗ್ಯಾರೆಂಟಿ ಕಾರ್ಡ್ ಗಳಿಗೆ ಸಹಿ ಮಾಡಿ ಕೊಡುತ್ತಿದ್ದಾರೆ. ಅವರೇನು ಈ ದೇಶದ ಪ್ರಧಾನಿನಾ, ರಾಷ್ಟ್ರಪತಿನಾ, ಅವರು ಕೊಡುವ ಗ್ಯಾರೆಂಟಿಗೆ ಯಾವುದೇ ಮರ್ಯಾದೆ ಇಲ್ಲ. ಅವರು ಕೊಡುವ ಗ್ಯಾರೆಂಟಿ ಕಾರ್ಡ್ ಗಳನ್ನು ಹರಿದು ಹಾಕಿ ಎಂದು ಹೇಳಿದರು.
ಲೋಕಸಭೆಯಲ್ಲಿ 543 ಸ್ಥಾನಗಳಿದ್ದು, ಬಹಮತಕ್ಕೆ 272 ಸ್ಥಾನಬೇಕು. ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ. ಹೀಗಾಗಿ ಕಾಂಗ್ರೆಸ್ ಬಹುಮತ ಬರುವುದಿಲ್ಲ. ಕಾಂಗ್ರೆಸ್ ಗೆ 40 ಕ್ಕಿಂತ ಹೆಚ್ಚು ಸ್ಥಾನ ಸಿಗುವುದಿಲ್ಲ. ರೈತರಿಗೆ, ಬಡವರಿಗೆ, ದಲಿತರಿಗೆ ಅನ್ಯಾಯ ಮಾಡಿರುವ ಕಾಂಗ್ರೆಸ್ ರಾಜ್ಯವನ್ನು ಆಳುವ ನೈತಿಕತೆ ಕಳೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.