ಬೆಂಗಳೂರು:- ಕಾಂಗ್ರೆಸ್ ಮತ್ತೆ ದ್ವೇಷದ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಮತ್ತೆ ದ್ವೇಷದ ರಾಜಕಾರಣ ಆರಂಭಿಸಿದೆ. ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಕಗ್ಗೊಲೆಯಾಗಿತ್ತು. ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಯಾಗಲು ದಿನಗಣನೆ ಶುರುವಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ದೇಶಾದ್ಯಂತ ಜನರು ಕಾತರದಿಂದ ಕಾಯುತ್ತಿದ್ದಾರೆ. ಕಾಂಗ್ರೆಸ್ ಮಾತ್ರ ಇದನ್ನು ಭಯವೆಂಬಂತೆ ಬಿಂಬಿಸುತ್ತಿದೆ. 3 ದಶಕದ ಹಿಂದಿನ ಕೇಸ್: ಜೈಲು ಶಿಕ್ಷೆ ಇದೇ ವೇಳೆ ಹುಬ್ಬಳ್ಳಿಯಿಂದ ರಾಮಜನ್ಮಭೂಮಿ ಹೋರಾಟದಲ್ಲಿ ಪಾಲ್ಗೊಂಡ ಇಬ್ಬರನ್ನು 30 ವರ್ಷಗಳ ಹಿಂದಿನ ಪ್ರಕರಣ ಸಂಬಂಧ ಜೈಲಿಗೆ ಕಳುಹಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ ಉದ್ಘಾಟನೆಯ ಆಚರಣೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿರುವ ಸಂದರ್ಭದಲ್ಲಿ ಇಂತಹ ಕ್ರಮವನ್ನು ಸರ್ಕಾರ ಕೈಗೊಂಡಿದೆ. ನಾನು ಕೂಡ ಆಗ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗವಹಿಸಿದ್ದೆ. ಈಗ ನನ್ನನ್ನೂ ಬಂಧಿಸುತ್ತೀರಾ? ಅಷ್ಟು ಧೈರ್ಯ ಇದೆಯಾ? ಎಂದು ರಾಜ್ಯ ಸರ್ಕಾರಕ್ಕೆ ಆರ್. ಅಶೋಕ್ ಪ್ರಶ್ನಿಸಿದರು.
ಕಾರ್ಯಕರ್ತರ ಮೇಲೆ ಹಾಕಿದ ಕೇಸು ವಾಪಸ್ ಪಡೆಯಬೇಕು. ಹಳೆಯ ಪ್ರಕರಣ ಹೊರತೆಗೆದು ಬಂಧಿಸಲು ಪೊಲೀಸ್ ಇಲಾಖೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ಇಂತಹ ದ್ವೇಷ ರಾಜಕಾರಣದ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.