ನವದೆಹಲಿ: ಅಮಿತ್ ಶಾ ಅವರ ಹೇಳಿಕೆಯನ್ನು ಕಾಂಗ್ರೆಸ್ ತಿರುಚುವ ಕೆಲಸ ಮಾಡಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಷ್ಟ್ರೀಯ ಪಕ್ಷದ ನಾಯಕ. ಆದರೆ, ಎಳೆ ಮಕ್ಕಳ ರೀತಿ ವರ್ತಿಸುತ್ತಿದ್ದಾರೆ. ಇತಿಹಾಸ ಇರುವ ಕುಟುಂಬ ಅಂತಾ ಏನೇನೋ ಮಾಡಲು ಸಾಧ್ಯವಿಲ್ಲ. ಜನರು ಅದನ್ನು ಒಪ್ಪುವುದಿಲ್ಲ. ಸಂವಿಧಾನ ಮುಖ್ಯ ಎನ್ನುವುದಕ್ಕೆ ಎರಡು ದಿನ ಚರ್ಚೆಗೆ ಅವಕಾಶ ಮಾಡಿಕೊಡಲಾಗಿತ್ತು ಎಂದು ಕಾಂಗ್ರೆಸ್ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಅಂಬೇಡ್ಕರ್ ಅವರ ಜೊತೆಗೆ ಕಾಂಗ್ರೆಸ್ ಹೇಗೆ ನಡೆದುಕೊಂಡಿತ್ತು ಎಂದು ಎಲ್ಲರಿಗೂ ಗೊತ್ತಿದೆ. ಅಂಬೇಡ್ಕರ್ ಅವರನ್ನು ಹೀಯಾಳಿಸುವ ಕೆಲಸ ಆಗಿಲ್ಲ. ಬಿಜೆಪಿ ಅಪಾರವಾದ ಗೌರವ ಇಟ್ಟುಕೊಂಡಿದೆ ಎಂದು ಕೇಂದ್ರ ಗೃಹ ಸಚಿವರನ್ನು ಸಮರ್ಥಿಸಿಕೊಂಡಿದ್ದಾರೆ.