ಬೆಂಗಳೂರು: ನೈಟ್ ಕರ್ಫ್ಯೂಯಿಂದ ಕಾಂಗ್ರೆಸ್ ಪಾದಯಾತ್ರೆಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಆಗ್ರಹಿಸಿ ನಾವು ಹೋರಾಡುತ್ತಿದ್ದೇವೆ.
ನಾವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡೆ ಪಾದಯಾತ್ರೆ ನಡೆಸುತ್ತೇವೆ ನಾವು ಮಾಡುವ ಪರಿಯಾತ್ರೆಯನ್ನು ತಡೆಯಲು ಯಾರಿಂದಲೂ ಕೂಡ ಸಾಧ್ಯವಿಲ್ಲ. ಏನೇ ಆದರೂ ನಾವು ಪಾದಯಾತ್ರೆ ಮಾಡೇ ಮಾಡುತ್ತೀವಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

