ಚಿಕ್ಕಮಗಳೂರು:– ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿದರು.
ನಮೋ ಭಾರತ್’ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶನಕ್ಕೆ ಯತ್ನಿಸಿದ್ದಾರೆ. ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಯುವ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಿದ್ದು, ಪುಂಗಿದಾಸ ಚಕ್ರವರ್ತಿ ಎಂದು ಘೋಷಣೆ ಕೂಗಿದ್ದಾರೆ. ಇನ್ನು ಏಕಾಏಕಿ 2 ತಂಡವಾಗಿ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಇದರಿಂದ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.