ಬೆಂಗಳೂರು ;- ಮುನಿರತ್ನ ವಿರುದ್ಧ ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡ್ತಿದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಖಂಡಿಸಿ ಹಾಗು ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ವಿರೋಧಿಸಿ ತಿಂಗಳಾಂತ್ಯಕ್ಕೆ ಮೂರು ದಿನ ಸರ್ಕಾರದ ವಿರುದ್ಧ ಧರಣಿ ನಡೆಸಲಿದ್ದು ಬೆಳಗಾವಿ ಅಧಿವೇಶನದಲ್ಲಿಯೂ ಈ ವಿಚಾರವನ್ನು ಇರಿಸಿಕೊಂಡು ಬಿಜೆಪಿ ಹೋರಾಟ ನಡೆಸಲಿದೆ ಎಂದರು.
ಮುನಿರತ್ನ ವಿರುದ್ಧ ಈ ರೀತಿಯ ಸೇಡಿನ ರಾಜಕಾರಣ ಸರಿಯಲ್ಲ. ಆಡಳಿತ ಪಕ್ಷ ನಮ್ಮ ಶಾಸಕ ಮುನಿರತ್ನ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿರುವುದನ್ನು ಖಂಡಿಸುತ್ತೇನೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮಂಜೂರಾಗಿ ಅರ್ಧಂಬರ್ಧ ಕೆಲಸ ಆಗಿ ನಿಲ್ಲಿಸುವ ಮೂಲಕ ಒಂದು ರೀತಿಯ ಗೊಂದಲದ ವಾತಾವರಣ ನಿರ್ಮಾಣ ಮಾಡಿದೆ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಕೊಡಲಿ ಪೆಟ್ಟು ನೀಡಿದೆ ಎಂದು ಆರೋಪಿಸಿದರು.