ಬೆಂಗಳೂರು :- ರಾಮಭಕ್ತರನ್ನೇ ಟಾರ್ಗೆಟ್ ಮಾಡಿ ಕಾಂಗ್ರೆಸ್ ಕಿರುಕುಳ ನೀಡುತ್ತಿದೆ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಒಂದೇ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ರಾಮಭಕ್ತರನ್ನು ಹಾಗೂ ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡಿ, ಕಿರುಕುಳ ನೀಡುತ್ತಿದೆ ಎಂದರು.
ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಹಾಗೂ ಸಂಸದ ಪ್ರತಾಪ್ ಸಿಂಹ ಅವರಿಗೆ ಸರ್ಕಾರ ಕಿರುಕುಳ ನೀಡುತ್ತಿರುವುದು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರ ಷಡ್ಯಂತ್ರದ ಭಾಗವಾಗಿದೆ ಎಂದು ಟೀಕಿಸಿದರು.
ಮರ ಕಡಿದ ಆರೋಪಕ್ಕೆ ಗುರಿ ಆಗಿರುವ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಮೇಲೆ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ಬಗ್ಗೆ ಹಲವಾರು ಅನುಮಾನಗಳು ಇವೆ. ಪ್ರತಾಪ್ ಸಿಂಹಗೆ ಪಾಠ ಕಲಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಕರೆ ಮಾಡಿ ಬೀಟೆ ಮರ ಕಡಿದು ಅ ಜಾಗದಲ್ಲಿ ಹಾಕುವಂತೆ ಹೇಳಿದ್ದರು. ಸಿಎಂ ಆದೇಶದಂತೆ ಬೀಟೆ ಮರವನ್ನು ಗೆಂಡೆಕೆರೆಯಿಂದ ಕಟ್ ಮಾಡಿಕೊಂಡು ಬಂದು ಇಲ್ಲಿ ಹಾಕೋಕೆ ಸಿಎಂ ಹೇಳಿದ್ದಾರೆ. ಪ್ರತಾಪ್ ಸಿಂಹನ ಸಹೋದರ ಮರ ಕಡಿದಿಲ್ಲ. ಸಿಎಂ ಹೇಳಿ ಮರ ಕಡಿಸಿ ಹಾಕಿಸಿ ಪ್ರತಾಪ್ ಸಿಂಹ ಹೆದರಿಸೋಕೆ ಹೀಗೆ ಮಾಡಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.
ಸಿಎಂ ಅವರು ಸಾಚಾ ಆಗಿದ್ದರೆ ಹೇಳಲಿ. ಅವರ ಪೋನ್ ಕಾಲ್ ಲಿಸ್ಟ್ ತೆಗೆಯಿರಿ, ಸತ್ಯ ಗೊತ್ತಾಗುತ್ತದೆ ಎಂದು ಹೇಳಿದರು.