ರಾಮನಗರ: ರಾಜ್ಯದಲ್ಲಿ ಮಹಾ ಮಾರಿ ಕರೋನಾ ರಣ ಕೇಕೆ ಹಾಕುತ್ತಿದ್ದು ಕರನೋವನ್ನು ತಡೆಗಟ್ಟುವ ಉದ್ದೇಶದೀಮದ ಸರ್ಕಾರ ಮುನ್ನೆಚ್ಚರಿಕೆಯ ಸಲುವಾಗ ಅನೇಕ ರೀತಿಯ ಬಿಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.
ಇದರ ನಡುವೆಯೂ ಸಹ ನಾಳೆಯಿಂದ ಮೇಕೆದಾಟು ಪಾದಯಾತ್ರೆ ಆರಂಭವಾಗಲಿದ್ದು, ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಕನಕಪುರದ ನಿವಾಸದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಶಾಸಕರು, ಹಿರಿಯ ಮುಖಂಡರ ಸಭೆ ನಡೆಯಿತು.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ಈಶ್ವರ ಖಂಡ್ರೆ, ರಾಮಲಿಂಗ ರೆಡ್ಡಿ, ಸಲೀಂ ಅಹಮದ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಸಿ.ಎಂ. ಇಬ್ರಾಹಿಂ ಮತ್ತಿತರರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.