ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಇಂಡಿಯಾ ಮೈತ್ರಿಕೂಟದಲ್ಲಿ ಒಂದಾಗಿರುವ ಎಎಪಿ, ಬಿಎಸ್ಪಿ, ಕಾಂಗ್ರೆಸ್ ಇಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ. ಅಧಿಕಾರಕ್ಕಾಗಿ ಹವಣಿಸುತ್ತಿರುವ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯ ತ್ರಿಕೋನ ಸ್ಪರ್ಧೆ ಉಂಟಾಗಿದೆ. ಇಂದು ಚುನಾವಣೆ ನಡೆಯುತ್ತಿದ್ದು,
ಫಲಿತಾಂಶದಲ್ಲಿ ಸಿಗುವ ಮತಗಳ ಲೆಕ್ಕಾಚಾರದ ಮೆಲೆ ಟಫ್ ಫೈಟ್ ಬಗ್ಗೆ ಸ್ಪಷ್ಟತೆ ಸಿಗಲಿದೆ. ಇನ್ನೂ ಬೆಳ್ಳಂಬೆಳಗ್ಗೆ ಕೊರೆವ ಚಳಿಯನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ. ಅಂತೆಯೇ ಲೋಕಸಭೆ ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬಂದು ಮತ ಚಲಾಯಿಸಿದ್ದಾರೆ.
ಬೇವಿನ ನೀರಿನಿಂದ ಸ್ನಾನ ಮಾಡಿದರೆ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜಗಳಿದೆ ಗೊತ್ತಾ..?
ದೆಹಲಿ ನಿರ್ಮಾಣ ಭವನದ ಮತಗಟ್ಟೆಗೆ ಬಂದು ಮತ ಚಲಾಯಿಸಿ 8:30ರ ವೇಳೆಗೆಲ್ಲಾ ಮತಗಟ್ಟೆಯಿಂದ ತೆರಳಿದ್ದಾರೆ. ಬಳಿಕ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್, ಆಪ್ ನಾಯಕ ಮನೀಶ್ ಸಿಸೋಡಿಯಾ, ಸೇರಿದಂತೆ ಅನೇಕ ನಾಯಕರು ಮತ ಚಲಾಯಿಸಿದ್ದಾರೆ.