ಬೆಂಗಳೂರು: ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರ. ಅದಕ್ಕೆ ರಾಹುಲ್ ಗಾಂಧಿ (Rahul Gandhi) ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ.
ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವ ಶಕ್ತಿ ಇದೆ. ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರವಾಗಿದ್ದು, ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದರು. ಯಾರು ಕೂಡ ಈ ದೇಶದಲ್ಲಿ ಭಾರತ್ ಜೋಡೋ (Bharat Jodo) ಮಾಡಿರಲಿಲ್ಲ. ಈಗ ಭಾರತ್ ಜೋಡೋ.2 ಪ್ರಾರಂಭ ಮಾಡ್ತಿದ್ದಾರೆ.
ಭಾರತ ನ್ಯಾಯ ಯಾತ್ರೆ ಮಾಡ್ತಿದ್ದಾರೆ. ಯಾಕಂದ್ರೆ ಈ ದೇಶದಲ್ಲಿ ಯಾರಿಗೂ ನ್ಯಾಯ ಸಿಕ್ಕಿಲ್ಲ. ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಸಿಗಬೇಕು ಅಂತ ಪಾದಯಾತ್ರೆ ಮಾಡ್ತಿದ್ದಾರೆ. ಇಂತವರ ಕೈಗೆ ಅಧಿಕಾರ ಸಿಗಬೇಕೋ ನರೇಂದ್ರ ಮೋದಿಗೆ ಅಧಿಕಾರ ಸಿಗಬೇಕೋ..?. ಹಾಗಾಗಿ ನಾವು ಎಲ್ಲರೂ ಹೋರಾಟ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂದು ಒತ್ತಿ ಹೇಳಿದರು.