ಬೆಂಗಳೂರು: ರಾಮಮಂದಿರ (Ram Mandir) ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ (Congress) ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಹೇಳಿಕೆ ನೀಡಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಕಾಂಗ್ರೆಸ್ ಪಕ್ಷದ ನಿಲುವನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿದರು.
South Korea: ನಾಯಿ ಮಾಂಸ ಸೇವನೆಗೆ ರದ್ದು : ದಕ್ಷಿಣ ಕೊರಿಯಾ ಸಂಸತ್ತಿನಲ್ಲಿ ಮಸೂದೆ ಅಂಗೀಕಾರ!
ರಾಮರಾಜ್ಯ, ರಾಮನ ಕನಸು ನನಸು ಆಗಬೇಕಿದೆ. ಆದರೆ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸ್ಸಿಗರು ಯಾಕಾಗಿ ರಾಮಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪ ಪಡುತ್ತಾರೆ ಎಂದರು.