ಗದಗ: ಲೋಕಸಭಾ ಚುನಾವಣೆ ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಎರಡು ಹೋಳಾಗುತ್ತದೆ. ಅದರ ಪರಿಣಾಮ ಕರ್ನಾಟಕದ ಮೇಲೆ ಆಗಲಿದ್ದು, ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಹಳ ದಿನ ಉಳಿಯಲು ಸಾಧ್ಯವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ ಉದಾಸಿಯವರು ಈ ಕ್ಷೇತ್ರದಲ್ಲಿ ಸಾಕಷ್ಡು ಅಭಿವೃದ್ಧಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾದ ನಂತರ ನೂರಕ್ಕೆ ನೂರು ಕೇಂದ್ರದ ಎಲ್ಲ ಯೋಜನೆಗಳನ್ನು ಈ ಕ್ಷೇತ್ರದಲ್ಲಿ ಜಾರಿಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
Grama panchayat jobs: ಪರೀಕ್ಷೆ ಇಲ್ಲದೆ ನೇರ ನೇಮಕಾತಿ..!ಜಸ್ಟ್ PUC ಪಾಸಾದರೆ ಸಾಕು – ತಿಂಗಳಿಗೆ ₹63,000 ಸಂಬಳ.!
ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರಿಂದ ಅಭೂತಪೂರ್ವವಾದ ಬೆಂಬಲ ದೊರೆಯುತ್ತಿದೆ. ವಿಶೇಷವಾಗಿ ನಮ್ಮ ಪಕ್ಷದ ಕಾರ್ಯಕರ್ತರು ಬಹಳ ಉತ್ಸಾಹದಿಂದ ಚುನಾವಣೆ ಮಾಡುವ ನಿರ್ಧಾರ ಮಾಡಿದ್ದಾರೆ. ಕೆ ಎಸ್ ಈಶ್ವರಪ್ಪ ಅವರು ಹಿರಿಯರಿದ್ದಾರೆ ಪಕ್ಷ ಕಟ್ಟುವಲ್ಲಿ ಅವರ ಪಾತ್ರ ದೊಡ್ಡದಿದೆ. ಪಕ್ಷದ ಮುಖಂಡರು ಅವರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಸಮಯವಿದೆ. ಅವರು ಪಕ್ಷದ ತೀರ್ಮಾನವನ್ನು ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.