ಬೆಂಗಳೂರು: HDK ನಿವಾಸದ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಪಡೆದ ಆರೋಪ ವಿಚಾರವಾಗಿ ಟ್ವಿಟರ್ನಲ್ಲಿ ಮತ್ತೆ ಹೆಚ್.ಡಿ.ಕುಮಾರಸ್ವಾಮಿಗೆ ಟಾಂಗ್ ನೀಡಿದ ಕಾಂಗ್ರೆಸ್, ಹೌದೌದು ಕುಮಾರಸ್ವಾಮಿಗಳೇ, ಬಿಡದಿ ಮನೆ, ಜೆ.ಪಿ.ನಗರದ ಮನೆ, ಆ ಮನೆ, ಈ ಮನೆ, ಎಲ್ಲೆಲ್ಲಿ ಮನೆಗಳಿವೆ, ಎಲ್ಲಿ ಏನಾಗ್ತಿದೆ ಎಂದು ಗೊತ್ತಾಗಲ್ಲ. ಯಾವ್ಯಾವ ಮನೆಯಲ್ಲಿ ಏನೇನಾಗುತ್ತಿದೆ ಎಂದು ನಿಮಗೇ ತಿಳಿದಿರುವುದಿಲ್ಲ ಪಾಪ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ರಾಜ್ಯದ ಮುಖ್ಯಮಂತ್ರಿಯಾಗಿದ್ದ ತಾವು ಕರೆಂಟ್ ಕಳ್ಳತನವನ್ನು ಕ್ಷುಲ್ಲುಕ ವಿಚಾರ ಎಂದು ತಿಪ್ಪೆ ಸಾರಿಸುತ್ತಿರುವುದಕ್ಕೆ ನಾಚಿಕೆಯಾಗಬೇಕು. ಹೀಗೆಯೇ ಇನ್ನೆಷ್ಟು ರಾಜ್ಯದ ಲೂಟಿಯನ್ನು ಸಮರ್ಥಿಸಿಕೊಳ್ಳುವಿರೋ ಏನೋ, ‘ಕ್ಷುಲ್ಲುಕ ವಿಚಾರ’ವೆಂದು ಸಮರ್ಥಿಸಿಕೊಳ್ಳುವಿರೋ ಏನೋ, ತಮ್ಮ ತಪ್ಪನ್ನು ಕೆಲಸದವರ ಮೇಲೆ ಹಾಕಿ ತಪ್ಪಿಸಿಕೊಳ್ಳುವ ಕುಟೀಲ ಪ್ರಯತ್ನ, ಹಿಟ್ ಆ್ಯಂಡ್ ರನ್ ನಿಮ್ಮ ಕಾಯಕ ಆಗಿದ್ದು ಪಲಾಯನವಾದದ ಭಾಗವಲ್ಲವೇ? ಮುಖ್ಯಮಂತ್ರಿಗಳ ಗೃಹ ಕಚೇರಿಯ 1.9 ಲಕ್ಷದ ಪೀಠೋಪಕರಣಗಳಿಗೆ 1.9 ಕೋಟಿ ಎಂದು ಸುಳ್ಳು ಆರೋಪ ಮಾಡಿದಾಗ ತಮ್ಮದು ಕ್ಷುಲ್ಲುಕ ಬುದ್ಧಿಯಾಗಿತ್ತೇ? ಗ್ಯಾರಂಟಿಗಳ ಬಗ್ಗೆ ರಾಜ್ಯದ ಜನತೆಗೆ ಸುಳ್ಳು ಸಂದೇಶ ಕೊಡುತ್ತಿದ್ದೀರಲ್ಲ ಅದು ನಿಮ್ಮ ಕ್ಷುಲ್ಲುಕ ಬುದ್ಧಿಯೋ, ಪ್ರಚಾರ ಗಿಟ್ಟಿಸಿಕೊಳ್ಳುವ ಹಪಹಪಿಯೋ? ತಾವು ಅಕ್ರಮ ಸಂಪರ್ಕ ಪಡೆದಾಗ ಕರ್ನಾಟಕ ಕತ್ತಲೆಯಲ್ಲಿ ಇರಲಿಲ್ಲ ಅಲ್ಲವೇ, ತಮ್ಮ ಮನೆಯ ದೀಪಾಲಂಕಾರಕ್ಕೆ ಯಾವುದೇ ತೊಂದರೆಯಾಗಲಿಲ್ಲ ಅಲ್ಲವೇ? ದೀಪಾಲಂಕಾರದ ಅದ್ಧೂರಿತನ ತೋರುವಾಗ ರಾಜ್ಯದ ಬರ ನೆನಪಾಗಲಿಲ್ಲವೇ? ನಿಮಗೆ ಯಾವುದಕ್ಕೂ ‘ಬರ’ ಇಲ್ಲವೆಂದು ದಾಡಸಿತನವೇ? ಎಂದು ಪ್ರಶ್ನಿಸಿದೆ.