ಚನ್ನಪಟ್ಟಣ (ಅ.30:) ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರಸಭೆಯ ಮಾಜಿ ಸದಸ್ಯರು, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಮನಗರ ಜಿಲ್ಲಾ ಉಪಾಧ್ಯಕ್ಷರಾಗಿದ್ದ ಸೈಯದ್ ಅಸ್ಗರ್ ಹಲಿರವರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಪಿಂಚಣಿದಾರರಿಗೆ ಗುಡ್ ನ್ಯೂಸ್: ಇನ್ನುಂದೆ ಮನೆಯಿಂದಲೇ “ಡಿಜಿಟಲ್ ಜೀವನ ಪ್ರಮಾಣ ಪತ್ರ” ಪಡೆಯಿರಿ!
ಚನ್ನಪಟ್ಟಣದ ಯರಬ್ ನಗರದಲ್ಲಿರುವ ಹಲಿರವರ ನಿವಾಸದಲ್ಲಿ ಬುಧವಾರ ಬೆಳಗ್ಗೆ ಕೇಂದ್ರ ಸಚಿವರಾಗಿರುವ ಹೆಚ್.ಡಿ ಕುಮಾರಸ್ವಾಮಿರವರು ಜೆಡಿಎಸ್ ಪಕ್ಷದ ಶಾಲು ಹೊದಿಸಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸಿ.ಬಿ ಸುರೇಶ್ ಬಾಬು, ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್, ಮಾಜಿ ಶಾಸಕರಾದ ಮಾಗಡಿ ಮಂಜುನಾಥ ಸೇರಿದಂತೆ ಅನೇಕರಿದ್ದರು.