ಮಡಿಕೇರಿ:– ಮೈಸೂರು ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ಸವಧಿ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು,ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿಯೇ ಬಂದು ನಿಂತರೂ ಜನ ಸೋಲಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಖಚಿತವೆಂದರು.
ಪ್ರತಾಪ್ ಸಿಂಹ ಅವರಿಗೆ ಈ ಈ ಬಾರಿ ಟಿಕೆಟ್ ಇಲ್ಲ ಎನ್ನುವ ಮಾಹಿತಿ ಇದೆ. ಹೀಗಾಗಿ ಪ್ರತಾಪ್ ಸಿಂಹ ಅವರು ಸಿಎಂ ಸಿದ್ದರಾಮಯ್ಯ ಬಗ್ಗೆ ಬಾಯಿಗೆ ಬಂದಂತೆ ಏನೇನೋ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯನವರನ್ನು ಸೋಮಾರಿ ಸಿದ್ದ ಎಂದು ಕರೆಯುವ ಮೂಲಕ ಅಗೌರವ ತೋರಿದ್ದಾರೆ.
ಸಿದ್ದರಾಮಯ್ಯ ಎಲ್ಲಿ, ಪ್ರತಾಪ್ ಸಿಂಹ ಎಲ್ಲಿ. ಮಾತನಾಡುವಾಗ ಯೋಚನೆ ಮಾಡಿ ಮಾತನಾಡಬೇಕು ಎಂದರು. ಪ್ರತಾಪ್ ಸಿಂಹ ಅವರು ಮೊದಲು ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಮೈಸೂರು- ಬೆಂಗಳೂರು ಹೈವೆ ನಾವೇ ಮಾಡಿದ್ದು ಅಂತಾರೆ. ಹೆದ್ದಾರಿ ಅನುಮೋದನೆ ಸಂದರ್ಭ ಅವರು ಎಂಪಿ ಆಗಿರಲಿಲ್ಲ. ಹೈವೇ ವಿಚಾರದಲ್ಲಿ ನಾವೆ ಮಾಡಿದ್ದು ಅಂತ್ತೀರಲ್ಲ ನಿಮ್ಮನೆಯಿಂದ ತಂದು ಮಾಡಿದ್ದ, ಇದೆಲ್ಲದರ ಹಿಂದೆ ಕಾಂಗ್ರೆಸ್ ಸರ್ಕಾರ ಕೊಡುಗೆ ಕೂಡ ಇದೆ. ಸಂಸದರಾಗಿ ಕೊಡಗು ಜಿಲ್ಲೆಗೆ ತಾವು ಏನು ಕೊಡುಗೆ ನೀಡಿದ್ದೀರಾ ಎನ್ನುವುದನ್ನು ಪತ್ರಿಕಾ ಪ್ರಕಟಣೆ ಮೂಲಕವಾದರೂ ಬಹಿರಂಗಪಡಿಸಿ ಎಂದು ಒತ್ತಾಯಿಸಿದರು.