ಹೈದರಾಬಾದ್;- ಕೇಂದ್ರದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಹೈದರಾಬಾದಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಅತ್ಯಂತ ಫಲಪ್ರದವಾಗಿತ್ತು. ಇದು ತೆಲಂಗಾಣದಲ್ಲಿ ನೋಟವನ್ನು ಬದಲಾಯಿಸಲಿದೆ. ಅಲ್ಲದೇ, ದೇಶದ ನೋಟವನ್ನು ಬದಲಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ದೇಶಕ್ಕೆ ಭರವಸೆ ನೀಡಿದ್ದೇವೆ ಎಂದರು.

ದೇಶದಾದ್ಯಂತ ಪಕ್ಷದ ಕಾರ್ಯಕರ್ತರಿಗೆ ಸಿಡಬ್ಲ್ಯುಸಿಯಿಂದ ಕರೆ ನೀಡಲಾಗಿದೆ. ಈಗ ವಿಶ್ರಾಂತಿ ತೆಗೆದುಕೊಳ್ಳದೆ, ಗೆಲ್ಲಲು ಹೋರಾಡಬೇಕಾಗಿದೆ.
ಎಲ್ಲಾ ಐದು ರಾಜ್ಯಗಳಲ್ಲಿ ಸರ್ಕಾರ ರಚಿಸಲಿದ್ದೇವೆ ಎಂಬ ಬಲವಾದ ವಿಶ್ವಾಸವಿದೆ ಎಂದು ತಿಳಿಸಿದರು.
