ಮೈಸೂರು: ನಮ್ಮಲ್ಲಿ ಒಳಜಗಳ ಇಲ್ಲ.ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ವೆಗಳಿಗೆ ಪ್ರತಿಕ್ರಿಯಿಸಿದ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು. ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಕ್ಯಾನ್ಸರ್ ರೋಗಿಗಳಿಗೆ ಶುಭ ಸುದ್ದಿ: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ನಮ್ಮ ಮಾಹಿತಿಯ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದರು. ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು ಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)