ಬಳ್ಳಾರಿ : ತೀವ್ರ ಕುತೂಹಲ ಕೆರಳಿಸಿದ್ದ ಸಂಡೂರಿನಲ್ಲಿ ಕಾಂಗ್ರೆಸ್ ಆಭ್ಯರ್ಥಿ ಅನ್ನಪೂರ್ಣ ತುಕಾರಂ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 18ನೇ ಸುತ್ತಿನಲ್ಲಿ ಕೈ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 9,568 ಮತಗಳ ಮುನ್ನಡೆ ಸಾಧಿಸಿದ್ದಾರೆ. ಇನ್ನೂ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಪರಾಜಿತ ಅಭ್ಯರ್ಥಿ ಬಂಗಾರಿ ಹನುಮಂತು , ಈ ಸೋಲಿನ ಹೊಣೆಯನ್ನು ನಾನು ಒತ್ತುಕೊಳ್ಳುತ್ತೇನೆ. ಯಾರ ಮೇಲೂ ಇದನ್ನು ಹೊರಿಸಲ್ಲ, ಕಾಂಗ್ರೆಸ್ ಹಣ ಬಲದಿಂದ ಈ ಚುನಾವಣೆ ಗೆದ್ದಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಇಲ್ಲಿಯೇ ಠಿಕಾಣಿ ಹೂಡಿದ್ದರು. ಸಚಿವ ಶಿವರಾಜ ತಂಗಡಗಿ ಉಸ್ತುವಾರಿ ಹೊತ್ತಿದ್ದ ಪ್ರದೇಶ ಸೇರಿ ಸಚಿವರು ಇದ್ದ ಪ್ರದೇಶದಲ್ಲಿ ನಮಗೆ ಹಿನ್ನಡೆ ಆಗಿದೆ. ಅಂಕಿ-ಅಂಶಗಳ ಪ್ರಕಾರ ನಮಗೆ ಸೋಲೇ ಇಲ್ಲ. ಚುನಾವಣೆ ಹತ್ತಿರ ಇದ್ದಾಗ ಎಲ್ಲ ಮಹಿಳೆಯರ ಖಾತೆಗೆ ೨ ಸಾವಿರ ಹಣ ಹಾಕಿದರು. ವೋಟಿಗೆ ೨ ಸಾವಿರ ಕೊಟ್ಟು ಮತಗಳನ್ನು ಖರೀದಿ ಮಾಡಿದರು. ೨೦೨೮ ರಲ್ಲಿ ಸಂಡೂರಲ್ಲಿ ಬಿಜೆಪಿ ಬಾವುಟ ಹಾರಿಸುತ್ತೇವೆ. ನಾನು ಅಲ್ಲಿಯೇ ಮನೆ ಮಾಡಿ ಜನರ ಜತೆ ಇರುತ್ತೇನೆ ೨೦೨೮ರಲ್ಲಿ ಯಾರೇ ಅಭ್ಯರ್ಥಿ ಆಗಲಿ ಒಗ್ಗಟ್ಟಿನಿಂದ ತುಕಾರಾಂ, ಸಂತೋಷ ಲಾಡ್ ಅವರನ್ನು ಸೋಲಿಸುತ್ತೇವೆ ಎಂದಿದ್ದಾರೆ.
ಕಾವೇರಿದ ಆನೇಕಲ್ ಪುರಸಭಾ ಉಪಚುನಾವಣೆ: ಸರತಿ ಸಾಲಲ್ಲಿ ನಿಂತು ಮತ ಹಾಕುತ್ತಿರುವ ಜನ!