ಚಿಕ್ಕಬಳ್ಳಾಪುರ:- ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಮಾಜಿ ಸಚಿವ ಸುಧಾಕರ್ ಭವಿಷ್ಯ ನುಡಿದಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತದಾನದ ದಿನ ಸಂಗ್ರಹಿಸಿದ ಸಮೀಕ್ಷೆಗಳು ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸ್ಥಾನಗಳು ಬರುತ್ತೆ ಅಂತ ಹೇಳಿವೆ. ಆದರೆ ಕೆಲವು ರಾಜ್ಯಗಳಲ್ಲಿ ಸಮೀಕ್ಷೆಗೆ ತದ್ವಿರುದ್ದವಾಗಿ ಫಲಿತಾಂಶ ಹೊರಬೀಳಲಿದೆ ಎಂದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದರು. ಆದರೆ ಅಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯುತ್ತದೆ. ಅಲ್ಲಿ ಸಮ್ಮಿಶ್ರ ಸರ್ಕಾರ ಬರಬಹುದು. ಮಧ್ಯಪ್ರದೇಶದಲ್ಲಂತೂ ಬಿಜೆಪಿ ಗೆಲುವು ಖಚಿತ ಹಾಗೆ ಹಿಮಾಚಲ ಪ್ರದೇಶ, ಚತ್ತೀಸ್ಘಡ, ರಾಜಾಸ್ಥಾನಗಳಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆದ್ದು ಪ್ರಾಬಲ್ಯ ಮೆರೆಯಲಿದೆ ಎಂದು ಹೇಳಿದ್ದಾರೆ.