ಬೆಂಗಳೂರು : ಅರಮನೆ ಮೈದಾನದಲ್ಲಿ ಸೋಮವಾರ ನಡೆದ “ಯುವ ಸಂಕಲ್ಪ” ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಚುನಾವಣೆ ಮೂಲಕ ಆಯ್ಕೆಯಾದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಇದೇ ವೇಳೆ ಡಿ.ಕೆ. ಶಿವಕುಮಾರ್ ಹಾಗೂ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮೊಹಮದ್ ಹ್ಯಾರಿಸ್ ನಲಪಾಡ್ ಅವರು ನೂತನ ಅಧ್ಯಕ್ಷರಾದ ಮಂಜುನಾಥ್ ಗೌಡ ಅವರಿಗೆ ಕಾಂಗ್ರೆಸ್ ಧ್ವಜ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಬಸನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಉದಯ್ ಭಾನು ಚಿಬ್, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕರಾದ ಸಲೀಂ ಅಹ್ಮದ್, ಪರಿಷತ್ ಸದಸ್ಯರಾದ ಯು.ಬಿ ವೆಂಕಟೇಶ್, ಮತ್ತಿತರ ನಾಯಕರು ಉಪಸ್ಥಿತರಿದ್ದರು.