ಬೆಂಗಳೂರು:- ಅಂಬೇಡ್ಕರರ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ಬಿವೈ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್: ಆರೋಪಿಗಳಿಗೆ ಜಾಮೀನು ಮಂಜೂರು!
ಈ ಸಂಬಂಧ ಮಾತನಾಡಿದ ಅವರು, ಅಂಬೇಡ್ಕರರ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ್ಸಿಗರಿಗೆ ಇಲ್ಲ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಹೆಚ್ಚು ಹೆಚ್ಚಾಗಿ ಸ್ಮರಿಸಿಕೊಳ್ಳುತ್ತಿದೆ. ಆದರೆ, ಹಿಂದೆ ಕಾಂಗ್ರೆಸ್ ಪಕ್ಷವು ಅವಕಾಶ ಸಿಕ್ಕಿದಾಗಲೆಲ್ಲ ಬಾಬಾಸಾಹೇಬ ಅಂಬೇಡ್ಕರರನ್ನು ನಿಂದಿಸುತ್ತ, ಅವಮಾನಿಸುತ್ತ ಬಂದಿತ್ತು ಎಂದು ವಿಜಯೇಂದ್ರ ಆಕ್ಷೇಪಿಸಿದರು.
ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಕೋಟಿಗಟ್ಟಲೆ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಮಹಾಧಿವೇಶನ ಮಾಡಲು ಹೊರಟಿದೆ. ನಕಲಿ ಕಾಂಗ್ರೆಸ್ಸಿನ ಈ ನೀತಿಯ ವಿರುದ್ಧ ಹಾಗೂ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನವನ್ನು ವಿರೋಧಿಸಿ ನಾಳೆ ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಿದ್ದೇವೆ ಎಂದರು.
ದೇಶ, ರಾಜ್ಯದಲ್ಲಿ ಇದೀಗ ಇರುವುದು ಅಸಲಿ ಕಾಂಗ್ರೆಸ್ ಪಕ್ಷವಲ್ಲ. ಇದು ನಕಲಿ ಕಾಂಗ್ರೆಸ್ ಪಕ್ಷ. ಮಹಾತ್ಮ ಗಾಂಧೀಜಿ ಮತ್ತು ಡಾ. ಅಂಬೇಡ್ಕರ್ ಅವರ ತತ್ವಗಳನ್ನು ಗಾಳಿಗೆ ತೂರಿದ ಪಕ್ಷ ಕಾಂಗ್ರೆಸ್ ಎಂದ ಅವರು, ಗಾಂಧೀಜಿ ಮತ್ತು ಅಂಬೇಡ್ಕರರ ಹೆಸರು ಹೇಳುವ ನೈತಿಕತೆ, ಯೋಗ್ಯತೆ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ಆಕ್ಷೇಪಿಸಿದರು.