ಹೊಸಪೇಟೆ:– ರಾಮಮಂದಿರ ಕಾರ್ಯಕ್ರಮ ಬಹಿಷ್ಕರಿಸಿ ಕಾಂಗ್ರೆಸ್ನವರಿಂದ ಅವಮಾನ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ ಶ್ರೀ ರಾಮುಲು ಹೇಳಿದ್ದಾರೆ.
ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್ಸಿನವರು ಬಹಿಷ್ಕಾರ ಮಾಡಿ ಇಡೀ ಭಾರತದ ಹಿಂದೂಗಳನ್ನು ಅವಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ದೂರಿದರು
ಹಿಂದೂಗಳ ಆರಾಧ್ಯ ದೈವ ರಾಮನ ಮೇಲೆ ಪ್ರೀತಿ ಇಲ್ಲ. ಶ್ರೀರಾಮ ಮಂದಿರ ಧ್ವಂಸ ಮಾಡಿದ ಬಾಬರ್ನ ಸಮಾಧಿಗೆ ಕಾಂಗ್ರೆಸ್ನವರು ಭೇಟಿ ನೀಡುತ್ತಾರೆ. ಆದರೆ, ಶ್ರೀರಾಮಮಂದಿರ ಉದ್ಘಾಟನೆಗೆ ಬರುತ್ತಿಲ್ಲ. ಇವರು ಯಾವತ್ತಿದ್ದರೂ ಡೋಂಗಿ ಜಾತ್ಯತೀತವಾದಿಗಳು. ಜಾತ್ಯತೀತತೆಯ ಮೇಲೆ ರಾಜಕಾರಣ ಮಾಡುತ್ತಾ ಈಗ ಶ್ರೀರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಿಂದ ದೂರ ಉಳಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೊಘಲ್ ದೊರೆ ಬಾಬರ್ನ ಮೇಲೆ ಪ್ರೀತಿ ಇರುವುದರಿಂದಲೇ 1952ರ ಸೆಪ್ಟೆಂಬರ್ನಲ್ಲಿ ಪಂಡಿತ ಜವಾಹರ್ ಲಾಲ್ ನೆಹರು ಬಾಬರ್ ಸಮಾಧಿಗೆ ಭೇಟಿ ನೀಡಿದ್ದರು. ಬಳಿಕ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಹಾಗೂ ರಾಹುಲ್ ಗಾಂಧಿ ಅವರು ಬಾಬರ್ ಸಮಾಧಿಗೆ ಭೇಟಿ ನೀಡಿದ್ದರು ಎಂದು ಕುಟುಕಿದರು.