ಹೊಸಪೇಟೆ:– ತನಿಖಾ ಸಂಸ್ಥೆಗಳ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು ಸಿಕ್ಕಿದೆ ಎಂದು ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿದ್ದರಿಂದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ಗೆ ಸೋಲು ಉಂಟಾಗಿದೆ ಎಂದರು.
ತೆಲಂಗಾಣದಲ್ಲಿ ಸಹ ಇದೇ ಪ್ರಯತ್ನ ನಡೆದರೂ ಮತದಾರರು ಕಾಂಗ್ರೆಸ್ ಪಕ್ಷವನ್ನು ಕೈಹಿಡಿದರು. ಕರ್ನಾಟಕದಲ್ಲಿ ಜಾರಿಗೆ ಬಂದ ಗ್ಯಾರಂಟಿಗಳ ಪ್ರಭಾವವೂ ತೆಲಂಗಾಣದಲ್ಲಿದೆ ಎಂದರು.
ರಾಜಸ್ಥಾನದಲ್ಲಿ ಆಡಳಿತ ವಿರೋಧಿ ಅಲೆ ಇರಲಿಲ್ಲ, ಆದರೂ ಕಾಂಗ್ರೆಸ್ ಸೋಲು ಕಂಡಿರುವುದು ಅಚ್ಚರಿ ತಂದಿದೆ ಎಂದರು. ಈ ವಿಧಾನಸಭೆ ಚುನಾವಣೆ ಫಲಿತಾಂಶ ಲೋಕಸಭಾ ಚುವಾವಣೆಯ ದಿಕ್ಸೂಚಿ ಅಲ್ಲ ಎಂದರು.