ಬೆಂಗಳೂರು:- ಕಾಂಗ್ರೆಸ್ಸಿನದು ದೆಹಲಿಯಲ್ಲಿ ಶೂನ್ಯ ಸಂಪಾದನೆ ಎಂದು ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಾತನಾಡಿದರು. ಅರವಿಂದ್ ಕೇಜ್ರಿವಾಲ್ ಅವರ ದೆಹಲಿ ಸರ್ಕಾರ ಭ್ರಷ್ಟಾಚಾರಕ್ಕೆ ಬಲಿಯಾಗಿದೆ. ಬಿಜೆಪಿ ಇಡೀ ದೇಶದಲ್ಲಿ ಭ್ರಷ್ಟಾಚಾರದ ವಿಚಾರದಲ್ಲಿ ಒಂದೇ ಒಂದು ಆಪಾದನೆಯನ್ನೂ ಹೊತ್ತಿಲ್ಲ. ಕರ್ನಾಟಕದಲ್ಲಿ ನಮ್ಮ ವಿರುದ್ಧ ಶೇ.40 ಕಮೀಷನ್, ಪೇ ಸಿಎಂ ಮತ್ತಿತರ ಆರೋಪ ಮಾಡಿ ಚುನಾವಣಾ ತಂತ್ರ ಹೆಣೆದಿದ್ದ ಕಾಂಗ್ರೆಸ್ಸಿನದು ದೆಹಲಿಯಲ್ಲಿ ಶೂನ್ಯ ಸಂಪಾದನೆಯಾಗಿದೆ. ಈಗ ಅವರು ಖಾತೆ ತೆರೆದಿಲ್ಲ. ಆದರೆ ಕ್ಯಾತೆ ತೆಗೆಯುವುದನ್ನು ಬಿಡುವುದಿಲ್ಲ ಎಂದು ತಿಳಿಸಿದರು.