ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸರಣಿ ಬಾಂಬ್ ಸ್ಫೋಟ (Serial Bomb Blast) ಮಾಡಲು ಸಂಚು ರೂಪಿಸಿದ್ದ 6 ಜನ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (NIA) ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಕಳೆದ ಜುಲೈನಲ್ಲಿ ಆರ್ಟಿ ನಗರದ ಮನೆ ಮೇಲೆ ದಾಳಿ ಮಾಡಿದ ಬೆಂಗಳೂರು ಸಿಸಿಬಿ ಪೊಲೀಸರು (CCB Police) ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್ ಪತ್ತೆಯಾಗಿತ್ತು. ನಂತರ ಈ ಪ್ರಕರಣ ಎನ್ಐಎಗೆ ವರ್ಗಾವಣೆಯಾಗಿತ್ತು.
ಶೋಧ ಕಾರ್ಯದ ವೇಳೆ ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಬಯಲಾಗಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.
ಪೌಡರ್ ರೂಪದ ಕೆಮಿಕಲ್ ಬಳಸಿ ಪೆಟ್ಟಿಗೆಯೊಂದರಲ್ಲಿ ಆರೋಪಿಗಳು ಅಡಗಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಂತರ ತನಿಖಾಧಿಕಾರಿಗಳು ಬಾಂಬ್ ನಿಷ್ಟ್ರೀಯ ದಳ (BDDS) ಮತ್ತು FSL ಅಧಿಕಾರಿಗಳ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಸಜೀವ ಗ್ರೇನೆಡ್ಗಳನ್ನ ಪತ್ತೆಮಾಡಿ ವಶಪಡಿಸಿಕೊಳ್ಳಲಾಗಿತ್ತು. ಗ್ರೆನೇಡ್ (Grenade) ಮೇಲಿದ್ದ ಮೇಡ್ ಇನ್ ವಿವರವನ್ನೇ ಆರೋಪಿಗಳು ಅಳಿಸಿ ಹಾಕಿದ್ದರು.