ಬೆಂಗಳೂರು:- ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಕೆಲವು ಸಮಾಜಘಾತುಕ ಶಕ್ತಿಗಳು. ಸಂಚು ರೂಪಿಸಿ ರಾಮಭಕ್ತರಿಗೆ ಮತ್ತು ಹಿಂದೂಗಳಿಗೆ ಘಾಸಿ ಮಾಡುವ ಷಡ್ಯಂತ್ರ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದ್ದರು.
ಶ್ರೀರಾಮನ ಫ್ಲೆಕ್ಸ್ ಹರಿದ ಘಟನೆ ಹಿಂದುಗಳಿಗೆ ಘಾಸಿ ಮಾಡುವ ಷಡ್ಯಂತ್ರಗಳನ್ನು ರೂಪಿಸಿದಂತೆ ತೋರುತ್ತಿದೆ. ಪೊಲೀಸ್ ಇಲಾಖೆ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಿ. ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದರು