ಪ್ರಕರಣದ ಹಿನ್ನೆಲೆ
17 ವರ್ಷದ ಸಂತ್ರಸ್ತೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದಳು. ಈ ವೇಳೆ ನೆರೆಮನೆ ನಿವಾಸಿ ವಿವಾಹಿತನಾಗಿದ್ದ ವಿಕ್ಕಿ ಪರಿಚಯವಾಗಿದ್ದನು. ಪ್ರೀತಿಸಿ ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಬಾಲಕಿಯೊಂದಿಗೆ ಆತ್ಯಾಚಾರವೆಸಗಿ ಹಲ್ಲೆ ಮಾಡಿದ್ದನು. ಈ ಬಗ್ಗೆ ನೊಂದ ಅಪ್ರಾಪ್ತೆ ತಾಯಿ ಬಳಿ ಹೇಳಿಕೊಂಡಿದ್ದಳು ಎಂದು ಬೊಮ್ಮನಹಳ್ಳಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬ್ಯಾಂಕ್ʼನಲ್ಲಿ ಸಾಲ ಮಾಡಿದ ವ್ಯಕ್ತಿ ಸಾವನ್ನಪ್ಪಿದ್ರೆ ಆ ಸಾಲ ತೀರಿಸೋರು ಯಾರು..? ಇಲ್ಲಿದೆ ಲೋನ್ ರೂಲ್ಸ್
ಈ ಸಂಬಂಧ ಸಂತ್ರಸ್ತೆ ತಾಯಿ ಬೊಮ್ಮನಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಲು ಹೋದ ಸಂತ್ರಸ್ತೆಯನ್ನ ಕಾನ್ ಸ್ಟೇಬಲ್ ಅರುಣ್ ಪರಿಚಯಿಸಿಕೊಂಡು ನ್ಯಾಯಕೊಡಿಸುವುದಾಗಿ ಭರವಸೆ ನೀಡಿದ್ದಲ್ಲದೆ ಕೆಲಸ ಕೊಡಿಸುವುದಾಗಿ ನಂಬಿಸಿದ್ದನು. ಕಳೆದ ಡಿಸೆಂಬರ್ನಲ್ಲಿ ಬಿಟಿಎಂ ಲೇಔಟ್ ಓಯೋ ರೂಮಿಗೆ ಬಾಲಕಿಯನ್ನು ಕರೆಯಿಸಿಕೊಂಡ ಕಾನ್ಸ್ಟೇಬಲ್ ಮದ್ಯದಲ್ಲಿ ಮತ್ತು ಬರುವ ಔಷಧಿ ಬೆರೆಸಿ ಕುಡಿಸಿ ಆಕೆ ಮೇಲೆ ಆತ್ಯಾಚಾರವೆಸಗಿದ್ದಾನೆ.
ಅಲ್ಲದೆ, ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ತನ್ನ ಬಳಿ ಖಾಸಗಿ ವಿಡಿಯೋಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ. ಮೈಕೋ ಲೇಔಟ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪೊಕ್ಸೊ ಹಾಗೂ ಬಿಎನ್ಎಸ್ ಕಾಯ್ದೆಯ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕೃತ್ಯ ನಡೆದ ಸ್ಥಳ ಆಧರಿಸಿ ಬೊಮ್ಮನಹಳ್ಳಿ ಪೊಲೀಸರಿಗೆ ಪ್ರಕರಣವನ್ನ ವರ್ಗಾವಣೆ ಮಾಡಿದ್ದಾರೆ. ಈ ಸಂಬಂಧ ಇಬ್ಬರನ್ನ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ.