ಬೆಂಗಳೂರು:- ದುಡ್ಡಿನ ವಿಚಾರಕ್ಕೆ ನಿತ್ಯವೂ ಗಲಾಟೆ ನಡೆದಿದ್ದು, ಕೊನೆಯಲ್ಲಿ ತಾಳ್ಮೆ ಕಳೆದುಕೊಂಡ ಗಂಡನಿಂದ ಹೆಂಡತಿ ಹತ್ಯೆ ನಡೆದಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ನಲ್ಲಿ ಜರುಗಿದೆ.
ಸಾಫ್ಟ್ವೇರ್ ಎಂಜಿನಿಯರ್ ಆಗಿ ರುವ ಗಂಡ ಶರತ್ ರಿಂದ ಹೆಂಡತಿ ಚೇತನಾ ರನ್ನು ಕೊಲೆ ಮಾಡಲಾಗಿದೆ. ಈ ದಂಪತಿ ನಡುವೆ ಆಗಾಗ ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಮಂಗಳವಾರ ರಾತ್ರಿ ಕೂಡ ಇಬ್ಬರ ನಡುವೆ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಪತ್ನಿ ಚೇತನಾಳನ್ನು ಪತಿ ಶರತ್ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ನಂತರ ತಡರಾತ್ರಿ ಮೂರು ಗಂಟೆ ಹೊತ್ತಿಗೆ ಅನಾರೋಗ್ಯದಿಂದ ಪತ್ನಿ ಪ್ರಜ್ಞೆ ತಪ್ಪಿದ್ದಾಳೆ ಎಂದು ಆಸ್ಪತ್ರೆಗೆ ಸೇರಿದ್ದಾನೆ. ಆ ವೇಳೆಗಾಗಲೇ ಪತ್ನಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಕೃತ್ಯ ಬೆಳಕಿಗೆ ಬಂದಿದೆ.
ಪೊಲೀಸರು ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.