ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಪೂರ್ವ ದ್ವಾರದ ಬಳಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಪುಷ್ಪರ್ಚನೆ ಮಾಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣ ದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಭಾರತದ ಸಂವಿಧಾನ ಪ್ರಸ್ತಾವನೆ ಭಾಗವನ್ನು ಬೋಧಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಕೈಗೊಳ್ಳಲು ತೆಳಂಗಾಣಕ್ಕೆ ತೆರಳುತ್ತಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.