ಬೀದರ್ (ಡಿ.06): ವಿಶ್ವದಲ್ಲೇ ಎಲ್ಲಾ ಸಂವಿಧಾನಗಳಿಗಿಂತ ಶ್ರೇಷ್ಠ ಸಂವಿಧಾನ ಯಾವುದಾದರೂ ಇದ್ದರೆ ಅದು ಬಾಬಾ ಸಾಹೇಬರು ರಚಿಸಿದ ಹಿಂದುಸ್ತಾನ್ (ಭಾರತ) ಸಂವಿಧಾನವಾಗಿದೆ. ಅಂತಹ ಸಂವಿಧಾನವನ್ನು ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರು, ಜೆಡಿಎಸ್ ಕೋರ್ ಕಮಿಟಿಯ ಸದಸ್ಯರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಸಂವಿಧಾನ ಶಿಲ್ಪಿ, ಮಹಾನ್ ಚೇತನ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ 67ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಬೀದರ್ ನಗರದ ಡಾ. ಬಿ.ಆರ್ ಅಂಬೇಡ್ಕರ್ ಸರ್ಕಲ್ ಬಳಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಬಾಬಾ ಸಾಹೇಬರ ಮೂರ್ತಿಗೆ ಮಾಲಾರ್ಪಣೆ ಮಾಡಿ ನಮನಗಳನ್ನು ಸಲ್ಲಿಸಿ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ನ್ಯಾಚುರಲ್ ಸ್ಟಾರ್… ‘ಹಾಯ್ ನಾನ್ನ’ ಪ್ರಮೋಷನ್ ನಲ್ಲಿ ನಾನಿ ಬ್ಯುಸಿ
ಎಲ್ಲರೂ ಸಂವಿಧಾನದ ಅಡಿಯಲ್ಲೇ ಕೆಲಸ ಮಾಡಿಕೊಂಡು ಹೋಗಬೇಕಾಗಿದೆ. ಬಾಬಾ ಸಾಹೇಬರು ಆ ಕಾಲದಲ್ಲಿ ಓದಿ, ಬರೆದು ವಿದೇಶಗಳಿಗೆ ಹೋಗಿ ಪದವಿ ಗಳಿಸಿ ಶ್ರೇಷ್ಠ ಸಂವಿಧಾನ ರಚಿಸಿದ್ದಾರೆ. ಅವರೇ ನಮ್ಮೆಲ್ಲರಿಗೆ ಪ್ರೇರಣೆಯಾಗಿದ್ದಾರೆ. ಅವರ ಮಾರ್ಗದರ್ಶನದಲ್ಲೇ ನಾವೆಲ್ಲರೂ ಸಾಗಬೇಕಾಗಿದೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಜ್ಞಾನಸಾಗರ್ ಬಂತೇಜಿ, ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಮ್, ಸಮಾಜ ಕಲ್ಯಾಣ ಇಲಾಖೆಯ ಡಿಡಿ ಸಿಂಧು, ಪ್ರಮುಖರಾದ ಮಾರುತಿ ಬೌದ್ಧೆ, ಬಾಬು ಪಾಶ್ವಾನ್, ಅನಿಲ್ ಕುಮಾರ್, ಬಾಬುರಾವ್ ಕಾರ್ಬಾರಿ, ಬಸವರಾಜ್ ಮಾಳ್ಗೆ, ಅಮೃತರಾವ್ ಚಿಮ್ಕೊಡೆ, ಅಭಿ ಕಾಳೆ, ಅಂಬಾದಾಸ್ ಗಾಯಕವಾಡ, ಶಿವಕುಮಾರ್ ನಿಲಿಕಟ್ಟೆ, ಶ್ರೀಪತಿರಾವ್ ದಿನ್ನೆ, ಅರುಣಕುಮಾರ್ ವರ್ಮಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಪ್ರಮುಖರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರಿದ್ದರು.