ನವದೆಹಲಿ: ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳ ನಿರ್ಮಾಣ ಗುರಿ. ನಗರ, ಗ್ರಾಮಾಂತರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. ಅದಲ್ಲದೆ ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯೋಜನೆಗಳಿಗೆ ಸರ್ಕಾರ 3 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ವಿನಿಯೋಗಿಸಿದೆ ಎಂದು ಹಣಕಾಸು ಸಚಿವರು ಹೇಳಿದರು.
Banking Jobs: ಡಿಗ್ರಿ ಪಾಸಾದವರಿಗೆ ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ..! ಬೇಗ ಅಪ್ಲೈ ಮಾಡಿ
ಕೈಗಾರಿಕಾ ಕಾರ್ಮಿಕರಿಗೆ ವಸತಿ ನಿಲಯದ ಸೌಲಭ್ಯ ಸಿಗಲಿದೆ. ಆಂಧ್ರಪ್ರದೇಶದ ಮೂರು ಜಿಲ್ಲೆಗಳಿಗೆ ಹಿಂದುಳಿದ ಪ್ರದೇಶಗಳ ಅನುದಾನವನ್ನು ಒದಗಿಸಲಾಗುವುದು ಎಂದೂ ಅವರು ಘೋಷಿಸಿದರು. ಇನ್ನೂ ಎನ್ಡಿಎ ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ ಘೋಷಿಸಲಾಗಿದೆ. ಆಂಧ್ರಪ್ರದೇಶ, ಬಿಹಾರ ರಾಜ್ಯಗಳಿಗೆ ಕೇಂದ್ರ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ. ಬಿಹಾರದಲ್ಲಿ ನೂತನ ವಿಮಾನ ನಿಲ್ದಾಣ, ವೈದ್ಯಕೀಯ ಕಾಲೇಜು ನಿರ್ಮಾಣ, ಆಂಧ್ರಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೂ ಬಜೆಟ್ನಲ್ಲಿ ಘೋಷಣೆಗಳನ್ನು ಮಾಡಲಾಗಿದೆ ಎಂದು ಹೇಳಿದರು.