ಬೆಂಗಳೂರು ;- ಮೂರು ಅಥವಾ ನಾಲ್ಕು ಜಿಲ್ಲೆಗಳಲ್ಲಿ ಹಜ್ ಭವನ ನಿರ್ಮಿಸಲು ಉದ್ದೇಶಿಸಲಾಗಿದೆ’ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಹಜ್ ಭವನ ನಿರ್ಮಿಸಲು ಈಗಾಗಲೆ ಭೂಮಿ ಗುರುತಿಸಲಾಗಿದೆ ಎಂದು ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಮಾಹಿತಿ ನೀಡಿದ್ದಾರೆ. ಹಜ್ ಸಚಿವರೊಂದಿಗೆ ಮಂಗಳೂರಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಲಾಗುವುದು. ಮಂಗಳೂರಿನಲ್ಲಿ ಹಜ್ಭವನ ನಿರ್ಮಾಣವಾದರೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯಾತ್ರಿಗಳು ತೆರಳಲು ಅನುಕೂಲವಾಗುತ್ತದೆ” ಎಂದು ಹೇಳಿದರು.

ರಾಜ್ಯದಿಂದ ಹಜ್ ಯಾತ್ರೆಗೆ ತೆರಳುವವರ ಅನುಕೂಲಕ್ಕಾಗಿ ಮುಂದಿನ ವರ್ಷಗಳಲ್ಲಿ ಮೂರು ಅಥವಾ ನಾಲ್ಕು ಜಿಲ್ಲೆಗಳಲ್ಲಿ ಹಜ್ ಭವನ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
