ಡೆಹ್ರಾಡೂನ್: ಸುರಂಗ ನಿರ್ಮಾಣ ಕಾರ್ಯದ ವೇಳೆ ಭೂಕುಸಿತ ಉಂಟಾಗಿ 36 ಕಾರ್ಮಿಕರು ಸಿಲುಕಿರುವ ಘಟನೆ ಉತ್ತರಾಖಂಡದ ಉತ್ತರಕಾಶಿಯಲ್ಲಿ ನಡೆದಿದೆ. ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮಣ್ಣಿನಡಿಗೆ ಸಿಲುಕಿರುವರ ರಕ್ಷಣೆಗಾಗಿ ಡ್ರಿಲ್ಲಿಂಗ್ ಯಂತ್ರಗಳನ್ನು ಬಳಸಿ ಆಮ್ಲಜನಕ ಪೈಪ್ಗಳನ್ನು ಒಳಗೆ ಕಳುಹಿಸಲಾಗಿದೆ.
Kolar: ಹುಡುಗಿಗೆ ಮೆಸೇಜ್ ಕಳಿಸಿದ್ದೇ ಕೊಲೆಗೆ ಕಾರಣವಾಯ್ತಾ..? ಐಜಿಪಿ ರವಿಕಾಂತೇಗೌಡ ಹೇಳೋದೇನು?
ಕಾರ್ಯಾಚರಣೆ ಇನ್ನೂ 2-3 ದಿನಗಳ ಕಾಲ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾದಿಂದ ದಾಂಡಲ್ಗಾಂವ್ಗೆ ಸಂಪರ್ಕಿಸುವ ಸುರಂಗದಲ್ಲಿ ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸುರಂಗದಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.