ಮಧುಮೇಹ ರೋಗಿಗಳು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಯಾವ ಆಹಾರವನ್ನೂ ಸೇವಿಸಬಾರದು.ಇನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಆಹಾರಗಳಿವೆ. ಅವುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
Siddaramaiah: ಕಾಂಗ್ರೆಸ್ ಸರ್ಕಾರ ಪತನ ಎಂಬುದು ಬಿಜೆಪಿಯ ಭ್ರಮೆ – ಸಿದ್ದರಾಮಯ್ಯ
ಮೊಳಕೆಯೊಡೆದ ಮೆಂತ್ಯೆಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಮಧುಮೇಹ ರೋಗಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿರಲಿದೆ. ಇದರಲ್ಲಿ ಫೈಬರ್ ಹೇರಳವಾಗಿ ಕಂಡು ಬರುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಇದು ಜೀರ್ಣಕ್ರಿಯೆಯನ್ನು ಕೂಡಾ ಸುಧಾರಿಸುತ್ತದೆ. ಮಧುಮೇಹ ರೋಗಿಗಳಲ್ಲಿ ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ.
ಮಧುಮೇಹ ರೋಗಿಗಳು ನೆನೆ ಹಾಕಿದ ಒಣ ಹಣ್ಣುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬಹುದು.ಇದಕ್ಕಾಗಿ ಬಾದಾಮಿ,ವಾಲ್ ನಟ್ಸ್,ಒಣದ್ರಾಕ್ಷಿ ಮತ್ತು ಇತರ ಒಣ ಹಣ್ಣುಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಬೇಕು. ಮರುದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸಬೇಕು. ಇದರಲ್ಲಿ ಪ್ರೋಟೀನ್,ಫೈಬರ್,ಮೆಗ್ನೀಸಿಯಮ್ ಮತ್ತು ಆಂಟಿಆಕ್ಸಿಡೆಂಟ್ ಗುಣಲಕ್ಷಣಗಳು ಕಂಡುಬರುತ್ತವೆ.ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಇದನ್ನು ಸೇವಿಸುವುದರಿಂದ ಜೀರ್ಣಕ್ರಿಯೆಯೂ ಆರೋಗ್ಯಕರವಾಗಿರುತ್ತದೆ.
ಮಧುಮೇಹ ರೋಗಿಗಳಿಗೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯವನ್ನು ಸೇವಿಸುವಂತೆ ಹೇಳಲಾಗುತ್ತದೆ.ಇದರಲ್ಲಿ ಫೈಬರ್ ಹೇರಳವಾಗಿ ಕಂಡು ಬರುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಇದಲ್ಲದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಿ, ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ.
ಹೆಸರು ಬೇಳೆಯನ್ನು ಸೇವಿಸುವುದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಇದಲ್ಲದೆ, ಇದು ತೂಕ ನಷ್ಟಕ್ಕೂ ಸಹ ಸಹಾಯ ಮಾಡುತ್ತದೆ.
ಮಧುಮೇಹ ರೋಗಿಗಳಿಗೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಕ್ಕೆ ನೀರನ್ನು ಸೇವಿಸಲು ಸಲಹೆ ನೀಡಲಾಗುತ್ತದೆ.ಇದಕ್ಕಾಗಿ ರಾತ್ರಿ ಮಲಗುವ ಮುನ್ನ ಒಂದು ಲೋಟ ನೀರಿನಲ್ಲಿ ಚಕ್ಕೆ ತುಂಡನ್ನು ನೆನೆಸಿಡಬೇಕು. ಮರುದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯಿರಿ.ಹೀಗೆ ನಿಯಮಿತವಾಗಿ ಸೇವಿಸುತ್ತಾ ಬಂದರೆ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.