ಪೇರಲವು ರುಚಿಕರವಾದ ಮತ್ತು ಪೌಷ್ಟಿಕಾಂಶದ ಹಣ್ಣಾಗಿದೆ. ಇದು ತುಂಬಾ ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಹೆಚ್ಚು ಫೈಬರ್ ಅಂಶವನ್ನು ಹೊಂದಿದೆ. ನಮ್ಮ ಆರೋಗ್ಯಕ್ಕೆ ಈ ಹಣ್ಣು ತುಂಬಾ ಒಳ್ಳೆಯದು. ಈ ಹಣ್ಣನ್ನು ನಾವು ವಿವಿಧ ರೀತಿಯಲ್ಲಿ ತಿನ್ನಬಹುದು.
2024-25ನೇ ಸಾಲಿನ ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ ಪ್ರಕಟ!
ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಕೆ, ಕಾರ್ಬೋಹೈಡ್ರೇಟ್ಗಳು, ಆಹಾರದ ಫೈಬರ್, ಕ್ಯಾಲೋರಿಗಳು ಮತ್ತು ಪೊಟ್ಯಾಸಿಯಮ್ನಂತಹ ಪೋಷಕಾಂಶಗಳು ಪೇರಲದಲ್ಲಿ ಹೇರಳವಾಗಿವೆ. ಹಾಗಾಗಿ ಇದನ್ನು ಪ್ರತಿದಿನ ತಿನ್ನುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಹಾಗಾದ್ರೆ ಪೇರಲ ಹಣ್ಣನ್ನು ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುವುದನ್ನು ನಾವಿಂದು ತಿಳಿಯೋಣ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಪೇರಲವು ವಿಟಮಿನ್ ಸಿಯ ಅತ್ಯುತ್ತಮ ಮೂಲವಾಗಿದೆ. ಇದು ಕಿತ್ತಳೆಗಿಂತ 2 ಪಟ್ಟು ಹೆಚ್ಚು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಮತ್ತು ರೋಗಗಳು ಹಾಗೂ ಸೋಂಕುಗಳಿಂದ ರಕ್ಷಿಸುವಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರವಹಿಸುತ್ತದೆ..
ಮಧುಮೇಹ ನಿಯಂತ್ರಣ: ಮಧುಮೇಹವು ವಿಶ್ವಾದ್ಯಂತ ಜನರು ಎದುರಿಸುತ್ತಿರುವ ಪ್ರಮುಖ ಆರೋಗ್ಯ ಸಮಸ್ಯೆಯಾಗಿದೆ. ಹೆಚ್ಚಿನ ಫೈಬರ್ ಅಂಶ ಮತ್ತು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನಿಂದ ಪೇರಲ ಮಧುಮೇಹಿಗಳಿಗೆ ಸೂಕ್ತವಾದ ಹಣ್ಣಾಗಿದೆ. ಪೇರಲ ಎಲೆಯ ರಸವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಹೃದಯದ ಆರೋಗ್ಯ: ಪೊಟ್ಯಾಸಿಯಮ್ ಮತ್ತು ಸೋಡಿಯಂನಲ್ಲಿ ಸಮೃದ್ಧವಾಗಿರುವ ಪೇರಲವು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಉತ್ತಮ ಕೊಲೆಸ್ಟ್ರಾಲ್ ಎಂದು ಕರೆಯಲ್ಪಡುವ HDL ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ತೂಕ ನಿಯಂತ್ರಣ: ಪೇರಲದಲ್ಲಿ ಕ್ಯಾಲೋರಿ ಕಡಿಮೆ ಮತ್ತು ನಾರಿನಂಶ ಹೆಚ್ಚಾಗಿರುತ್ತದೆ. ಆದ್ದರಿಂದ ಇದು ಚಯಾಪಚಯವನ್ನು ನಿಯಂತ್ರಿಸಲು, ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಮತ್ತು ತೂಕ ನಷ್ಟವನ್ನು ಉತ್ತೇಜಿಸಲು ಒಳ್ಳೆಯದು. ಹೆಚ್ಚಿನ ಕ್ಯಾಲೋರಿ ತಿಂಡಿಗಳ ಬದಲಿಗೆ ಪೇರಲವನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು
ಮೆದುಳಿನ ಕಾರ್ಯ: ಪೇರಲದಲ್ಲಿ ವಿಟಮಿನ್ ಬಿ6 ಮತ್ತು ವಿಟಮಿನ್ ಬಿ3 ಸಮೃದ್ಧವಾಗಿದೆ. ಆದ್ದರಿಂದ ಇದನ್ನು ಆಹಾರದಲ್ಲಿ ಸೇರಿಸುವುದರಿಂದ ಮೆದುಳಿಗೆ ರಕ್ತದ ಹರಿವು ಸುಧಾರಿಸುತ್ತದೆ. ನರಗಳನ್ನು ವಿಶ್ರಾಂತಿ ಮಾಡುತ್ತದೆ ಮತ್ತು ಅರಿವಿನ ಕಾರ್ಯವನ್ನು ಸುಧಾರಿಸುತ್ತದೆ.
ಆರೋಗ್ಯಕರ ಚರ್ಮ: ಪೇರಲದಲ್ಲಿ ಕ್ಯಾರೋಟಿನ್, ಲೈಕೋಪೀನ್, ವಿಟಮಿನ್ ಎ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ, ಇದು ನಮ್ಮ ಚರ್ಮವನ್ನು ಹಾನಿಯಿಂದ ರಕ್ಷಿಸಲು, ಸುಕ್ಕುಗಳನ್ನು ಕಡಿಮೆ ಮಾಡಲು ಮತ್ತು ಮೈಬಣ್ಣವನ್ನು ಸುಧಾರಿಸಲು ಸಹಾಯ ಮಾಡುತ್ತದೆ
ಸಂತಾನೋತ್ಪತ್ತಿ ಆರೋಗ್ಯ: ಪೇರಲದಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ, ಇದು ಹುಟ್ಟುವ ಮಗುವಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಇದರಲ್ಲಿರುವ ಫೋಲೇಟ್ ಭ್ರೂಣದಲ್ಲಿನ ನ್ಯೂರಲ್ ಟ್ಯೂಬ್ ದೋಷಗಳನ್ನು ತಡೆಯಲು ಸಹಾಯ ಮಾಡುತ್ತದೆ.
ಪಿರಿಯಡ್ಸ್ ನೋವನ್ನು ಕಡಿಮೆ ಮಾಡುತ್ತದೆ: ಮಹಿಳೆಯರು ಪ್ರತಿದಿನ ಪೇರಲ ಎಲೆಯ ರಸವನ್ನು ಸೇವಿಸುವುದರಿಂದ ಪಿರಿಯಡ್ ನೋವಿನ ತೀವ್ರತೆಯನ್ನು ಗಣನೀಯವಾಗಿ ಕಡಿಮೆ ಆಗುತ್ತದೆ. ಕೆಲವೊಮ್ಮೆ ಕೆಲವು ನೋವು ನಿವಾರಕಗಳಿಗಿಂತ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ.
ದೃಷ್ಟಿ ಸುಧಾರಿಸುತ್ತದೆ: ಪೇರಲದಲ್ಲಿರುವ ಹೆಚ್ಚಿನ ಪ್ರಮಾಣದ ವಿಟಮಿನ್ ಎ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ವಿಟಮಿನ್ ಕಳಪೆ ದೃಷ್ಟಿಯನ್ನು ತಡೆಯುತ್ತದೆ ಮತ್ತು ಮ್ಯಾಕ್ಯುಲರ್ ಡಿಜೆನರೇಶನ್ ಮತ್ತು ಕಣ್ಣಿನ ಪೊರೆ ಸೇರಿದಂತೆ ಹಾನಿಯಿಂದ ಕಣ್ಣುಗಳನ್ನು ರಕ್ಷಿಸುತ್ತದೆ