ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಐಟೆಲ್ P55 5G ಮೊಬೈಲ್ ಶೇ. 26% ರಷ್ಟು ನೇರ ಡಿಸ್ಕೌಂಟ್ ಹೊಂದಿದೆ. ಈ ಫೋನಿನ 128GB ROM ಸ್ಟೋರೇಜ್ ವೇರಿಯಂಟ್ 9,999ರೂ. ಗಳ ಬೆಲೆಯಲ್ಲಿ ಲಭ್ಯ. ಹಾಗೆಯೇ ವೆಬ್ಸೈಟ್ನಲ್ಲಿ ಲಭ್ಯ ಇರುವ ಬ್ಯಾಂಕ್ ಡಿಸ್ಕೌಂಟ್ ಪಡೆದುಕೊಂಡರೆ, ಇನ್ನಷ್ಟು ಆಫರ್ ಬೆಲೆಗೆ ಫೋನ್ ಖರೀದಿಸಲು ಅವಕಾಶ ಇದೆ.
ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಹಾಗೆಯೇ ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸರ್ ಒಳಗೊಂಡಿದೆ. ಅಲ್ಲದೇ ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಸೌಲಭ್ಯ ಸಹ ಒಳಗೊಂಡಿದೆ. ಇನ್ನುಳಿದಂತೆ ಐಟೆಲ್ P55 5G ಮೊಬೈಲ್ನ ಇತರೆ ಫೀಚರ್ಸ್ ಯಾವುವು ಎಂಬುದನ್ನು ತಿಳಿಯೋಣ ಬನ್ನಿರಿ.
ಐಟೆಲ್ P55 5G ಫೋನ್ 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್ಡಿ ಡಿಸ್ಪ್ಲೇ ಅನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಪಡೆದಿದ್ದು, ಈ ಡಿಸ್ಪ್ಲೇ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 267 PPI ಆಗಿದೆ.
ಐಟೆಲ್ ಸಂಸ್ಥೆಯ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 6nm ಪ್ರೊಸೆಸರ್ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಕೂಡಾ ಪಡೆದಿದೆ. ಹಾಗೆಯೇ ಈ ಫೋನ್ 4GB RAM + 64GB ಹಾಗೂ 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.
ಐಟೆಲ್ P55 5G ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸರ್ ಮತ್ತು ಸೆಕೆಂಡರಿ ಕ್ಯಾಮೆರಾ ಬೇಸಿಕ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರ ಜತೆ 8 ಮೆಗಾ ಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದ್ದು, ಹಾಗೆಯೇ ಬೇಸಿಕ್ ಎಡಿಟಿಂಗ್ ಆಯ್ಕೆಗಳು ಲಭ್ಯ.
ಐಟೆಲ್ P55 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್ ಸೈಡ್ ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್, ಬ್ಲೂಟೂತ್ 5.1, ಜಿಪಿಎಸ್, ಯುಎಸ್ಬಿ ಟೈಪ್-ಸಿ ಆಯ್ಕೆಗಳನ್ನು ಸಹ ಹೊಂದಿದೆ.