ಬೆಂಗಳೂರು:– ಹೆಚ್ಚುವರಿ ವೆಚ್ಚ ಮಾಡದೆ ಡಬ್ಬಲ್ ವೇ ಮಾದರಿ ಮೆಟ್ರೋ ಮಾರ್ಗ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು DCM ಡಿಕೆಶಿ ಹೇಳಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಗೆ ನಿಯಂತ್ರಿಸಲು ಅಗತ್ಯ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚುವರಿ ವೆಚ್ಚ ಮಾಡದೆ ಡಬ್ಬಲ್ ವೇ ಮಾದರಿ ಮೆಟ್ರೋ ಮಾರ್ಗ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ. ತನ್ಮೂಲಕ ಮೆಟ್ರೋ ಮಾರ್ಗದ ಪಕ್ಕದಲ್ಲೇ ಎಲಿವೇಟೆಡ್ ರಸ್ತೆ ಅನುಷ್ಠಾನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ನಮ್ಮ ಮೆಟ್ರೋ ರೈಲು ಯೋಜನೆ ಜಾರಿಯಾಗುವ ಕಡೆಗಳಲ್ಲಿ ರಸ್ತೆ ಕಂ ರೈಲು ಯೋಜನೆ ಅನುಷ್ಠಾನಗೊಳಿಸಲು ಚಿಂತನೆ ನಡೆಸಲಾಗಿದೆ.
ಇದರಡಿ ಮೆಟ್ರೋ ಮಾರ್ಗವನ್ನು ಮೇಲ್ಸೇತುವೆಗಳ ಮೇಲೆ ನಿರ್ಮಾಣ ಮಾಡಲಾಗುವುದು. ಯೋಜನೆಗೆ ತಗಲುವ ವೆಚ್ಚವನ್ನು ಬಿಬಿಎಂಪಿ ಮತ್ತು ಬಿಎಂಆರ್ಸಿಎಲ್ ಸಂಸ್ಥೆಗಳು ಹಂಚಿಕೊಳ್ಳಬಹುದು. ಅದರಿಂದ ಭೂಸ್ವಾಧೀನ ಹಾಗೂ ರಸ್ತೆ ನಿರ್ಮಾಣಕ್ಕೆ ಆಗುವ ಹೆಚ್ಚುವರಿ ವೆಚ್ಚವೂ ತಪ್ಪಲಿದ್ದು, ಶೀಘ್ರದಲ್ಲಿ ಮೇಲ್ಸೇತುವೆ ಮತ್ತು ಮೆಟ್ರೋ ರೈಲು ಮಾರ್ಗ ನಿರ್ಮಾಣವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು