ಬಿಗ್ಬಾಸ್ ಸ್ಪರ್ಧಿ, ನಟಿ ತನಿಷಾ ಕುಪ್ಪಂಡ ಅವಹೇಳನಕಾರಿಯಾಗಿ ಮಾತನಾಡಿದ್ದಾರ ಎಂದು ಆರೋಪಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ನಟಿ ತನಿಷಾ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇತ್ತೀಚಿನ ಸಂಚಿಕೆಯೊಂದರಲ್ಲಿ ನಟಿ ತನಿಷಾ ಡ್ರೋನ್ ಪ್ರತಾಪ್ ಅವರೊಂದಿಗೆ ಮಾತನಾಡುವ ವೇಳೆ ಬೋವಿ ಜನಾಂಗದ ಬಗ್ಗೆ ಅವಮಾನಕರ ಪದ ಬಳಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.
ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬುವವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ, ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ಬಿಗ್ ಬಾಸ್ ಸ್ಪರ್ಧಿ ತನಿಷಾ ಅವರು, ವಡ್ಡ ಎಂಬ ಪದ ಬಳಸುವ ಮೂಲಕ ಭೋವಿ ಸಮುದಾಯಕ್ಕೆ ಅಪಮಾನ ಎಸಗಿದ್ದಾರೆ.
ಭೋವಿ ಸಮುದಾಯವು ಪರಿಶಿಷ್ಟ ಜಾತಿಗೆ ಸೇರಿದೆ ಎಂದು ತಿಳಿದೂ ಸಹ ಅಪಮಾನ ಮಾಡಲಾಗಿದೆ. ತನಿಷಾ ಅವರನ್ನು ಈ ಕೂಡಲೇ ಬಿಗ್ಬಾಸ್ ಮನೆಯಿಂದ ಹೊರಗೆ ಕಳಿಸಬೇಕು, ಪೊಲೀಸರು ತನಿಷಾರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.