ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮತ್ತೊಂದೆಡೆ ಕೊಗ್ರೆ-ಶೃಂಗೇರಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಕೊಗ್ರೆ ಸಮೀಪದ ಹುಲ್ಲಿನಗದ್ದೆ ಸೇತುವೆಗೂ ಜಲದಿಗ್ಭಂದನವಾಗಿದೆ.
Bitter Gourd: ಎಚ್ಚರ..! ಹಾಗಲಕಾಯಿ ತಿಂದ ನಂತರ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ತಿನ್ನಬೇಡಿ!
ಸೇತುವೆ ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಸಂಚಾರಕ್ಕೆ ಪರದಾಡುವಂತಾಗಿದೆ. ಅಲ್ಲದೇ ರಣಮಳೆಗೆ ತುಂಗಾ ನದಿಯ ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡಿದೆ. ಇದರಿಂದ ಶೃಂಗೇರಿ ಪಟ್ಟಣದ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿದೆ. ಮೈದಾನದಲ್ಲಿರುವ ಅಂಗಡಿ ಮುಂಗಟ್ಟುಗಳು ಅರ್ಧದಷ್ಟು ಮುಳುಗಡೆಯಾಗಿವೆ. ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿವೆ.